6:37 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕೊರೊನಾ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಬಿಸಿ: ಫೀಲ್ಡಿಗಿಳಿದ ಖಾಕಿ ಪಡೆ; ಎಲ್ಲೆಡೆ ಭಾರಿ ತಪಾಸಣೆ

08/01/2022, 13:43

ಬೆಂಗಳೂರು/ಮಂಗಳೂರು(reporterkarnataka.con): ಒಮಿಕ್ರಾನ್ ಸೋಂಕು ಹೆಚ್ಚಳದಿಂದಾಗಿ ರಾಜ್ಯದಲ್ಲಿ ಇಂದಿನಿಂದ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ರಾಜಧಾನಿ ಬೆಂಗಳೂರು, ಕಡಲನಗರಿ ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ನಿನ್ನೆ ರಾತ್ರಿಯಿಂದಲೇ ಪೊಲೀಸರು ಫೀಲ್ಡ್‌ಗಿಳಿದಿದ್ದು, ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಮತೆ ಹಲವು ನಗರಗಳ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಅನಗತ್ಯವಾಗಿ ರಸ್ತೆಗೆ ಬರುವ ಜನರ ವಿಚಾರಣೆ ಮಾಡಲಾಗುತ್ತಿದೆ. ಸಿಲಿಕಾನ್ ಸಿಟಿ, ಕಡಲನಗರಿ, ಸಾಂಸ್ಕೃತಿಕ ನಗರಿಯ ರಸ್ತೆಗಳು ಖಾಲಿ ಖಾಲಿಯಾಗಿ ಬಿಕೋ ಎನ್ನುತ್ತಿವೆ.

ರಾಜ್ಯದ ಕೆಲವು ನಗರಗಳಲ್ಲಿ ವೀಕೆಂಡ್ ಕರ್ಫ್ಯೂಗೆ ಬೆಲೆ ಕೊಡದೆ ಜನ ತಮ್ಮ ಪಾಡಿಗೆ ತಾವು ಓಡಾಡಿಕೊಂಡಿದ್ದಾರೆ. ಮೈಸೂರಿನ ದೊಡ್ಡ ಕೆರೆ ಕ್ರೀಡಾಂಗಣದಲ್ಲಿ ಯುವಕರು ಕರ್ಫ್ಯೂ ಮರೆತು ಕ್ರಿಕೆಟ್ ಆಡುತ್ತಿದ್ದರು. ಪೊಲೀಸರು ಸ್ಥಳಕ್ಕೆ ಬಂದು ಎಚ್ಚರಿಕೆ ನೀಡಿ ಎಲ್ಲರನ್ನು ಮನೆಗೆ ಕಳಿಸಿದ್ದಾರೆ. ಕೊಪ್ಪಳದಲ್ಲಿ ವೀಕೆಂಡ್ ಕರ್ಫ್ಯೂ ಬಗ್ಗೆ ತಲೆಕೆಡಿಸಿಕೊಳ್ಳದ ಜನ ಸಾಮೂಹಿಕವಾಗಿ ನಿಂತು ಟೀ ಸೇವಿಸುತ್ತಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಬಿಎಂಟಿಸಿ ಓಡಾಟ ದೈನಂತಿನಂತೆ ಇರೋದಿಲ್ಲ. ಶೇ.10ರಷ್ಟು ಬಸ್‌ಗಳು ಮಾತ್ರ ರಸ್ತೆಗಿಳಿಯಲಿವೆ. ಕರ್ಫ್ಯೂ ಸಮಯದಲ್ಲಿ ಓಡಾಟ ನಡೆಸಲು ಅನುಮತಿ ಇರುವವರು ಬಸ್‌ಗಾಗಿ ಕಾಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿವೆ.


ಅಂತಾರಾಜ್ಯ ಬಸ್ ಓಡಾಟಕ್ಕೆ ನಿರ್ಬಂಧ ಇಲ್ಲ. ಆದರೆ ಗೋವಾ, ಕೇರಳಾ ಹಾಗೂ ಮಹಾರಾಷ್ಟ್ರದಿಂದ ಬರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಹೊರ ರಾಜ್ಯದಿಂದ ಆಗಮಿಸುವ ಪ್ರಯಾಣಿಕರ ಬಳಿ ಆರ್‌ಟಿಪಿಸಿಆರ್ ವರದಿ ಇರುವುದು ಕಡ್ಡಾಯ. ಇಲ್ಲವಾದರೆ ಬಸ್‌ಗೆ ಪ್ರವೇಶ ಇರುವುದಿಲ್ಲ. ಮೆಟ್ರೋ ಸಂಚಾರ ಎಂದಿನಂತೆ ಇದ್ದು, 20 ನಿಮಿಷಕ್ಕೊಂದು ಮೆಟ್ರೋ ಬರಲಿದೆ. ಬೆಳಗ್ಗೆ 8 ರಿಂದ ರಾತ್ರಿ 9 ರವರೆಗೆ ಮಾತ್ರ ಮೆಟ್ರೋ ಸೇವೆ ಲಭ್ಯವಿರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು