ಇತ್ತೀಚಿನ ಸುದ್ದಿ
ಕೊರೊನಾ ರೋಗಿಗಳಲ್ಲಿ ಬ್ಯ್ಲಾಕ್ ಫಂಗಸ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃಢಪಟ್ಟಿಲ್ಲ
17/05/2021, 16:20
ಮಂಗಳೂರು (reporterkarnataka news): ರಾಜ್ಯದಲ್ಲಿ ಕೊರೊನಾ ಪೀಡಿತರಲ್ಲಿ ಬ್ಯ್ಲಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದೆ ಎನ್ನಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾದ ಎರಡು ಪ್ರಕರಣಗಳು ಇನ್ನೂ ದೃಢಪಟ್ಟಿಲ್ಲ ಎಂದು ತಿಳಿದು ಬಂದಿದೆ.
ಜಿಲ್ಲೆಯಲ್ಲಿ ಕೊರೊನಾಪೀಡಿತ ಇಬ್ಬರು ವ್ಯಕ್ತಿಗಳಲ್ಲಿ ಭಾನುವಾರ ಬ್ಯ್ಲಾಕ್ ಫಂಗಸ್ ಲಕ್ಷಣಗಳು ಕಂಡುಬಂದಿದ್ದು, ಆದರೆ ಇದು ಇನ್ನು ದೃಢಪಟ್ಟಿಲ್ಲ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.
ಈ ನಡುವೆ ರಾಜ್ಯದಲ್ಲಿ ಬ್ಯ್ಲಾಕ್ ಫಂಗಸ್ ಕುರಿತು ಶೀಘ್ರದಲ್ಲೇ ತಜ್ಞರ ಸಮಿತಿ ರಚಿಸಲಾಗುವುದು. ಈ ಸಮಿತಿ ಯಾವ ರೀತಿಯ ಚಿಕಿತ್ಸೆ ನೀಡಬೇಕು ಎಂದು ನಿರ್ದೇಶನ ನೀಡಲಿದೆ. ಕೇಂದ್ರ ಸರಕಾರ ಇದಕ್ಕೆ ಬೇಕಾಗಿರುವ ಆಂಪೊಟೆರಿಸಿನ್ ಔಷಧವನ್ನು ನೀಡಲಿದೆ. 20 ಸಾವಿರ ಡೋಸ್ ಗೆ ಮನವಿ ಮಾಡಲಾಗಿದೆ. ಬ್ಯ್ಲಾಕ್ ಫಂಗಸ್ ಗೆ 7 ವಾರಗಳ ನೀಡಬೇಕಾಗಿದ್ದು, ಇದಕ್ಕೆ 20ರಿಂದ 3 ಲಕ್ಷ ರೂ. ಖರ್ಚಾಗುತ್ತದೆ. ಇದನ್ನು ಉಚಿತವಾಗಿ ನೀಡಲು ಸಿಎಂ ಜೊತೆ ಚರ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.