9:03 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಆತ್ಮವಿಶ್ವಾಸ ತುಂಬಲು, ನೋವು ಮರೆಯಲು ಸಂಗೀತ ರಸದೌತಣ, ಯೋಗ

03/06/2021, 06:42

ಡಿ .ಆರ್. ಜಗದೀಶ್ ನಾಗಮಂಗಲ

info.reporterkarnataka@gmail.com

ಸೋಂಕಿತರಲ್ಲಿ ತಮ್ಮ ನೋವನ್ನು ಮರೆಸು ಶಕ್ತಿ ಸಂಗೀತದ ರಸದೌತಣದಲ್ಲಿದೆ. ಸೋಂಕಿತರು ಆತ್ಮವಿಶ್ವಾಸ  ಹಾಗೂ ಆರೋಗ್ಯದಿಂದ ಇರಬೇಕೆಂದು ಶಾಸಕ ಸುರೇಶ್ ಗೌಡ ತಿಳಿಸಿದರು.

ದೇವಲಾಪುರ ಹೋಬಳಿ ಸಮೀಪವಿರುವ ಮುರಾರ್ಜಿ ದೇಸಾಯಿ ವಸತಿ  ಶಾಲೆಯಲ್ಲಿರುವ ಕೋವಿಡ್ ಸೆಂಟರ್ ನ ಕೇಂದ್ರದಲ್ಲಿರುವ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಯೋಗ ಹಾಗೂ ಜನಪದ ಸಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕರು ಮಾತನಾಡಿದರು.

ಸೋಂಕಿತರಲ್ಲಿ ಭಯ, ಆತಂಕ ದೂರ ಮಾಡಲು ಯೋಗ ಹಾಗೂ ಸಂಗೀತ ಇವೆರಡನ್ನು ಆಸ್ವಾದಿಸಬೇಕು. ಆರೋಗ್ಯಕರ ವಾತಾವರಣದಿಂದ ಕೊರೊನಾ ಮುಕ್ತರಾಗಿ ಆರೋಗ್ಯವಾಗಿರಿ ಎಂದು ತಿಳಿಸಿದರು.

ಸೋಂಕಿತರು ಭಯಪಡದೆ ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಚಿಕಿತ್ಸೆಯನ್ನು ಪಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಿ ಎಚ್ಚರಿಕೆಯಿಂದ ಸೋಂಕನ್ನು ಗುಣ ಪಡಿಸಿಕೊಂಡು ನಗುನಗುತ ಮನೆಗೆ ತೆರಳಿ. ಸಂತೋಷದಿಂದ ಜೀವನ ನಡೆಸಿ ಎಂದು  ತಹಶೀಲ್ದಾರ್ ಕುಂಞಿ ಅಹಮದ್ ಮನವಿ ಮಾಡಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.  ರಮೇಶ. ಪೊಲೀಸ್ ಇಲಾಖೆಯವರು ಹಾಜರಿದ್ದರು.

ಮಂಜೇಶ್ ನೇತೃತ್ವದ ಗಾಯಕರು ಜನಪದ ಸಂಜೆ ಕಾರ್ಯಕ್ರಮ ನಡೆಸಿ ಸೋಂಕಿತರಲ್ಲಿ ಆತ್ಮವಿಶ್ವಾಸ ತುಂಬಿದರು.

ಇತ್ತೀಚಿನ ಸುದ್ದಿ

ಜಾಹೀರಾತು