8:19 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ‌ ಮಾಡೋಣ: ಶಾಸಕ‌ ವೇದವ್ಯಾಸ ಕಾಮತ್

27/05/2021, 18:52

ಮಂಗಳೂರು(reporterkarnataka news):

ಕೋವಿಡ್ ಸೋಂಕಿತರ ಆರೋಗ್ಯದ ಕುರಿತು ನಿಗಾ ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯದ ಕುರಿತು ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಂದರ್ ಆರೋಗ್ಯ ಕೇಂದ್ರದಲ್ಲಿ ಸಂಬಂಧಪಟ್ಟ‌ ವಾರ್ಡ್`ಗಳ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ನಿಯಂತ್ರಣಕ್ಕಾಗಿ ನಮ್ಮ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ತಮ್ಮ ಶಕ್ತಿ ಮೀರಿ ಪ್ರಯತ್ನಿಸುತಿದ್ದಾರೆ. ಸೋಂಕಿತರ ಆರೋಗ್ಯದ ಕುರಿತು ಕಾಳಜಿ ವಹಿಸುವ, ಮಾಹಿತಿ ಪಡೆಯುವ ಕೆಲಸವನ್ನು ಮಾಡುತಿದ್ದಾರೆ ಎಂದು ಶಾಸಕ ಕಾಮತ್ ಹೇಳಿದರು. 

ಅಲ್ಪ ಪ್ರಮಾಣದಲ್ಲಿ ಕೋವಿಡ್ ಸೋಂಕಿನ‌ ರೋಗ ಲಕ್ಷಣಗಳು ಕಂಡು ಬಂದರೆ ಪರೀಕ್ಷೆಗೊಳಪಡುವಂತೆ ಅವರಲ್ಲಿ ಮನವಿ ಮಾಡಿಕೊಳ್ಳಬೇಕು. ರೋಗ ಉಲ್ಬಣಗೊಂಡು ಪರಿಸ್ಥಿತಿ ಕೈ ಮೀರುವ ಹಂತದ ವರೆಗೂ ಕಾಯಬಾರದು. ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಅವರು ನುಡಿದರು.

ಕೋವಿಡ್ ಸೋಂಕು ಹರಡದಂತೆ ತಡೆಗಟ್ಟುವುದರೊಂದಿಗೆ ಡೆಂಗ್ಯೂ, ಮಲೇರಿಯಾ ರೋಗದ ಕುರಿತು ಗಮನ ನೀಡಬೇಕು. ಸೊಳ್ಳೆ ಪರದೆ ವಿತರಣೆ ಅಥವ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. 

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಪಾಲಿಕೆ ಸದಸ್ಯರಾದ ಪೂರ್ಣಿಮಾ ಎಂ., ಜಯಶ್ರೀ ಕುಡ್ವ, ಬಂದರ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು