ಇತ್ತೀಚಿನ ಸುದ್ದಿ
ಕೊರೊನಾ ಸೋಂಕು ಏರಿಕೆ: ಇಂದು ಆರೋಗ್ಯ ಇಲಾಖೆಯಿಂದ ತಾಂತ್ರಿಕ ಸಲಹಾ ಸಮಿತಿ ಜತೆ ಮಹತ್ವದ ಸಭೆ
07/06/2022, 09:59
ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಮತ್ತೆ ಏರಿಕೆಯಾಗುತ್ತಿದ್ದು, ನಾಲ್ಕನೇ ಅಲೆ ಭೀತಿ ಎದುರಾದ ಹಿನ್ನೆಲೆಯಲ್ಲಿ ಇಂದು ಸಂಜೆ 7 ಗಂಟೆಗೆ ಟಾಸ್ಕ್ ಫೋರ್ಸ್ ಜತೆ ಇಲಾಖೆಯ ಮಹತ್ವದ ಸಭೆ ನಡೆಸಲಿದೆ.
ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.
ಈ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಆರೋಗ್ಯ ಇಲಾಖೆ, ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದೆ. ಇಂದು ಸಂಜೆ 7 ಗಂಟೆಗೆ ಟಾಸ್ಕ್ ಫೋರ್ಸ್ ಜತೆ ಇಲಾಖೆಯ ಮಹತ್ವದ ಸಭೆ ನಡೆಸಲಿದೆ. ಕೊರೊನಾ ಪ್ರಕರಣ ಹೆಚ್ಚಳ ಸಂಬಂಧ ಚರ್ಚೆ ನಡೆಯಲಿದೆ.
ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಜತೆ ಸಭೆ ನಡೆಸುವುದಾಗಿ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಮಾಹಿತಿ ನೀಡಿದ್ದಾರೆ.