1:20 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಕೊರೊನಾ ಸೋಂಕು ಏರಿಕೆ: ಇಂದು ಆರೋಗ್ಯ ಇಲಾಖೆಯಿಂದ ತಾಂತ್ರಿಕ ಸಲಹಾ ಸಮಿತಿ ಜತೆ ಮಹತ್ವದ ಸಭೆ

07/06/2022, 09:59

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಮತ್ತೆ ಏರಿಕೆಯಾಗುತ್ತಿದ್ದು, ನಾಲ್ಕನೇ ಅಲೆ ಭೀತಿ ಎದುರಾದ ಹಿನ್ನೆಲೆಯಲ್ಲಿ ಇಂದು ಸಂಜೆ 7 ಗಂಟೆಗೆ ಟಾಸ್ಕ್ ಫೋರ್ಸ್ ಜತೆ ಇಲಾಖೆಯ ಮಹತ್ವದ ಸಭೆ ನಡೆಸಲಿದೆ. 

ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.

ಈ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಆರೋಗ್ಯ ಇಲಾಖೆ, ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದೆ. ಇಂದು ಸಂಜೆ 7 ಗಂಟೆಗೆ ಟಾಸ್ಕ್ ಫೋರ್ಸ್ ಜತೆ ಇಲಾಖೆಯ ಮಹತ್ವದ ಸಭೆ ನಡೆಸಲಿದೆ. ಕೊರೊನಾ ಪ್ರಕರಣ ಹೆಚ್ಚಳ ಸಂಬಂಧ ಚರ್ಚೆ ನಡೆಯಲಿದೆ.

ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಜತೆ ಸಭೆ ನಡೆಸುವುದಾಗಿ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು