6:24 PM Thursday16 - January 2025
ಬ್ರೇಕಿಂಗ್ ನ್ಯೂಸ್
ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ…

ಇತ್ತೀಚಿನ ಸುದ್ದಿ

ಕೊರೊನಾ ವಾರಿರ್ಯರ್ಸ್ ತಾರತಮ್ಯ ಬೇಡಃ ರಮಾನಾಥ ರೈ

19/05/2021, 11:08

ಮಂಗಳೂರು(reporterkaranatakanews): ಶಿಕ್ಷಕರು, ಪಂಚಾಯತ್ ಪಿಡಿಓ, ಕಾರ್ಮಿಕ ಇಲಾಖೆಯ ಸಿಬಬಂದಿಯನ್ನು ಕೊರೊನಾ ವಾರಿಯರ್ಸ್ ಪಟ್ಟಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ದುಡಿಯುತ್ತಿರುವ ಎಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಸರಕಾರದ ಎಲ್ಲ ವಿಶೇಷ ಸೌಲಭ್ಯ ನೀಡಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಗ್ರಾಮ ಪಂಚಾಯತು ಮಟ್ಟದಲ್ಲಿ ಕೊರೊನಾ ಸೋಂಕು ನಿಯಂತ್ರಣ ಕಾರ್ಯದಲ್ಲಿ ಶಾಲಾ ಶಿಕ್ಷಕರು ಮತ್ತು ಗ್ರಾಮ ಪಂಚಾಯತುಗಳ ಪಂಚಾಯತು ಅಭಿವೃದ್ಧಿ ಅಧಿಕಾರಿ (ಪಿಡಿಓ) ಪಾತ್ರ ಮಹತ್ವದಾಗಿದ್ದು, ಇವರನ್ನು ಕೂಡ ಕೊರೊನಾ ವಾರಿಯರ್ಸ್ ಎಂದು ಸರಕಾರ ಕೂಡಲೇ ಪರಿಗಣಿಸಬೇಕು ಎಂದು ರಮಾನಾಥ ರೈ ಒತ್ತಾಯಿಸಿದ್ದಾರೆ.

ಇದೇ ರೀತಿಯಲ್ಲಿ ವಲಸೆ ಕಾರ್ಮಿಕರು ಸೇರಿದಂತೆ ಇನ್ನಿತರ ಕಾರ್ಮಿಕರೊಂದಿಗೆ ಸಂಪರ್ಖ ಹೊಂದಿರುವ ಮತ್ತು ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕ ಇಲಾಖೆಯ ನೌಕರರಿಗೆ ಕೂಡ ಕೊರೊನಾ ವಾರಿಯರ್ಸ್ ಗಳಿಗ ನೀಡಲಾಗುವ ಸೌಲಭ್ಯಗಳನ್ನು ನೀಡಬೇಕು ಎಂದವರು ಪತ್ರಿಕಾ ಹೇಳಿಕೆಯ ಮೂಲಕ ಸರಕಾರವನ್ನು ಒತ್ತಾಯಿಸಿದ್ದಾರೆ.

ಈಗಾಗಲೇ ನಮ್ಮ ರಾಜ್ಯದಲ್ಲಿ ಹಲವು ಮಂದಿ ಶಿಕ್ಷಕರು, ಶಿಕ್ಷಣ ಇಲಾಖೆ ಸಿಬ್ಬಂದಿ ಕೋವಿಡ್‌ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೋವಿಡ್‌ ಕಾರ್ಯಕ್ಕಾಗಿ ತೊಡಗಿಸಿಕೊಳ್ಳಲಾಗಿದೆ. ಇವರೆಲ್ಲರನ್ನು ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸುವುದು ಅಗತ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು