8:52 AM Tuesday24 - September 2024
ಬ್ರೇಕಿಂಗ್ ನ್ಯೂಸ್
ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ… 2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!!

ಇತ್ತೀಚಿನ ಸುದ್ದಿ

ಕೊರೊನಾ, ಝೀಕಾ ವೈರಸ್ ಭೀತಿ: ದ.ಕ. ಜಿಲ್ಲೆಯ ಕೇರಳ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ; ಆರ್‌ಟಿಪಿಸಿಆರ್ ಕಡ್ಡಾಯ

13/07/2021, 20:52

ಮಂಗಳೂರು(reporterkarnataka news): ಕೇರಳದಲ್ಲಿ ಸೊಳ್ಳೆಯಿಂದ ಹರಡುವ ಝೀಕಾ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಚಾಮರಾಜನಗರ ಹಾಗೂ ಕರ್ನಾಟಕ ಕೇರಳ ಗಡಿ ಪ್ರದೇಶದಲ್ಲಿ ಎಚ್ಚರಿಕೆ ವಹಿಸುವಂತೆ ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ತಾಗಿಕೊಂಡಿರುವ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ನೆರೆಯ ಕೇರಳದಲ್ಲಿ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಈಡಿಸ್‌ ರೋಗವಾಹಕ ಸೊಳ್ಳೆಗಳ ನಿಯಂತ್ರಣಕ್ಕೆ ನಿಗಾ ವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಈಗಾಗಲೇ ಸೂಚನೆ ನೀಡಿದ್ದಾರೆ.

ಕೇರಳದಿಂದ ದ.ಕ. ಜಿಲ್ಲೆಗೆ ಆಗಮಿಸುವವರ ತಪಾಸಣೆಗೆ ಸಂಬಂಧಿಸಿ ಈಗಾಗಲೇ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಅಥವಾ ಕೋವಿಡ್ ಲಸಿಕಾ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿಲಾಗಿದೆ. ಉಳಿದಂತೆ ಝೀಕಾಕ್ಕೆ ಸಂಬಂಧಿಸಿ ಹೊಸ ಮಾರ್ಗಸೂಚಿ ಜಾರಿ ಮಾಡಿಲ್ಲ.

ಸೊಳ್ಳೆಗಳಿಂದ ಈ ವೈರಸ್ ಹರಡುವುದರಿಂದ ರಾಜ್ಯದಿಂದ ಬರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಈ ಝೀಕಾ ವೈರಸ್‌ನ ಗುಣಲಕ್ಷಣಗಳನ್ನು ಪತ್ತೆಹಚ್ಚುವುದು ಕ್ಲಿನಿಕಲ್ ಆಧಾರದಲ್ಲಿ ಮಾಡಬೇಕಾಗುತ್ತದೆ. ಈ ಬಗ್ಗೆ ಯಾವುದೇ ಗಾಬರಿ ಬೇಡ. ಗಡಿಗಳಲ್ಲಿ ಈ ಬಗ್ಗೆ ಇನ್ನೂ ಹೆಚ್ಚಿನ ರೀತಿಯ ಯಾವ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ 
ಈಗಾಗಲೇ ತಿಳಿಸಿದ್ದಾರೆ.

ಈ ಮಧ್ಯೆ ಡಿಸಿಪಿ ಹರಿರಾಂ ಶಂಕರ್ ಅವರು ಕೇರಳ – ಕರ್ನಾಟಕ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಹಾಗೂ ಕೇರಳದಿಂದ ಬರುವವರಿಗೆ ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು