3:53 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

06/04/2025, 20:29

- ಚಿಕಿತ್ಸೆಗೆ ವಾರ್ಷಿಕ ಕನಿಷ್ಠ ಐವತ್ತು ಲಕ್ಷ ರೂ. ವೆಚ್ಚ. ಗರಿಷ್ಠ ಕೋಟಿ ದಾಟುವ ಸಾಧ್ಯತೆ

- ಮಕ್ಕಳನ್ನು ದತ್ತು ಪಡೆಯಲು ಸಂಸ್ಥೆಗಳಿಗೆ ಮನವಿ

- ಇಂದಿರಾಗಾಂಧಿ ಮಕ್ಕಳ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 22 ಮಕ್ಕಳು

ಬೆಂಗಳೂರು(reporterkarnataka.com):ನಮ್ಮ ದೇಶದಲ್ಲಿ ಅದರಲ್ಲೂ ನಮ್ಮ ಕರ್ನಾಟಕದಲ್ಲಿ ಅಪರೂಪದ ಕಾಯಿಲೆಗಳಿಗೆ ತುತ್ತಾದ ನೂರಾರು ಮಕ್ಕಳು ಇದ್ದಾರೆ. ಇವರಲ್ಲಿ ಕೆಲವರಿಗೆ ಚಿಕಿತ್ಸೆ ನೀಡಲು ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ. ಇಂಥ ಮಕ್ಕಳಿಗೆ ಸೂಕ್ತ ಹಾಗೂ ಸಮರ್ಪಕ ಹಾಗೂ ಪರಿಣಾಮಕಾರಿ ಚಿಕಿತ್ಸೆ ಕೊಡಿಸಲು ಕಾರ್ಪೊರೇಟ್‌ ಸಂಸ್ಥೆಗಳ ಜೊತೆಗೂಡಿ “ಯೋಜನೆ” ರೂಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಈ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಪರಿಣಾಮಕಾರಿ ಕ್ರಮಕ್ಕೆ ಮುಂದಾಗಿದ್ದಾರೆ.
ಲೈಸೊಸಮಲ್‌ ಸ್ಟೋರೇಜ್‌ ಡಿಸ್‌ ಆರ್ಡರ್‌ ಎಂಬ ಅತ್ಯಂತ ಅಪರೂಪದ ಕಾಯಿಲೆಗೆ ಹಲವಾರು ಮಕ್ಕಳು ತುತ್ತಾಗಿದ್ದಾರೆ. ಈ ಪೈಕಿ ಕರ್ನಾಟಕದಲ್ಲಿ ಗೌಷೆ ರೋಗ ಎಂಪಿಎಸ್‌ (Gaucher), ಪಾಂಪೆ ಎಂಬ ಆನುವಂಶಿಕ ಕಾಯಿಲೆಯೂ ಈ ಗುಂಪಿಗೆ ಸೇರಿವೆ.
ರಾಷ್ಟ್ರೀಯ ಅಪರೂಪ ಕಾಯಿಲೆ ನೀತಿಯಡಿ (ಎನ್‌ಪಿಆರ್‌ಡಿ) ಇಂಥ ರೋಗಕ್ಕೆ ತುತ್ತಾಗಿರುವ ಮಕ್ಕಳಿಗೆ ಚಿಕಿತ್ಸೆ ಒದಗಿಸಲು ಕೇಂದ್ರ ಸರ್ಕಾರ ಅನುದಾನ ಒದಗಿಸುತ್ತಿದೆ. 2016ರಿಂದ ಕರ್ನಾಟಕದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿಯೂ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಚಿಕಿತ್ಸಾ ವೆಚ್ಚ ಒಂದು ವರ್ಷಕ್ಕೆ ಕನಿಷ್ಠ 50 ಲಕ್ಷ ರೂಪಾಯಿಗಳಾಗುತ್ತದೆ. ಗರಿಷ್ಠ ಕೋಟಿ ದಾಟಬಹುದು ಎಂದು ಅಂದಾಜಿಸಲಾಗಿದೆ.
*ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಪ್ರಮುಖ ಕೇಂದ್ರ:*
ದೇಶದಲ್ಲಿ ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡಲು ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಫಾರ್‌ ರೇರ್‌ ಡೀಸಿಸ್‌ ಎಂಬ 13 ಕೇಂದ್ರಗಳನ್ನು ಗುರುತಿಸಲಾಗಿದೆ. ಈ ಪೈಕಿ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಕೂಡ ಒಂದಾಗಿದೆ.
ಇಂದಿರಾಗಾಂಧಿ ಸಂಸ್ಥೆಯಲ್ಲಿ 22 ಮಕ್ಕಳಿಗೆ ಕನಿಷ್ಠ ಮಿತಿಯಾದ 50 ಲಕ್ಷ ರೂ. ಅನುದಾನ ನೀಡಿ ಚಿಕಿತ್ಸೆಯನ್ನು ನೀಡಲಾಗಿದೆ. ಇದುವರೆಗೆ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ ಕರ್ನಾಟಕ ಸರ್ಕಾರದಿಂದ 76 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈಗ ಹೆಚ್ಚಿನ ಅನುದಾನಕ್ಕೆ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲಾಗಿದೆ.
ಈ ನಿಟ್ಟಿನಲ್ಲಿ ಸಚಿವರಾದ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌, ಮಕ್ಕಳಿಗೆ ಚಿಕಿತ್ಸೆ ಕೊಡಿಸಲು ನಿರಂತರ ಪ್ರಯತ್ನ ಪಡುತ್ತಿದ್ದಾರೆ. ಸರ್ಕಾರದ ಜೊತೆಗೆ ಕಾರ್ಪೊರೇಟ್‌ ಕಂಪನಿಗಳು ಕೈ ಜೋಡಿಸಿದರೆ ಈ ಮಕ್ಕಳ ಬಾಳಿನಲ್ಲಿ ಬೆಳಕು ತರಿಸಬಹುದು ಎಂದು ಕ್ರಮಕ್ಕೆ ಮುಂದಾಗಿದ್ದಾರೆ.
ವೈದ್ಯಕೀಯ ವೆಚ್ಚಗಳನ್ನು ಹಂಚಿಕೊಳ್ಳುವ ಭಾಗವಾಗಿ, ಸಂಸ್ಥೆಯಲ್ಲಿ ಇರಿಸಲಾಗಿರುವ ಕಾರ್ಪಸ್ ನಿಧಿಯ ಸ್ವಲ್ಪ ಭಾಗವನ್ನು ವಿನಿಯೋಗಿಸಲು ಐಜಿಐಸಿಎಚ್ ಡಾ. ಕೆ.ಎಸ್. ಸಂಜಯ್ ಅವರಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.
ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ಕೊಡಿಸುವ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆ
‌ಈಗ ಕಾರ್ಪೊರೇಟ್‌ ಸಂಸ್ಥೆಗಳಿಗೆ ಮನವಿ ಮಾಡಿದೆ.
ಕಾರ್ಪೊರೇಟ್‌ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್‌) ಯೋಜನೆಯಡಿ ಕಂಪನಿಗಳು ಅನುದಾನ ನೀಡಲಿ ಅಥವಾ ಮಕ್ಕಳನ್ನು ದತ್ತು ಪಡೆದು ಚಿಕಿತ್ಸಾ ವೆಚ್ಚ ಭರಿಸಲಿ ಎಂದು ಮನವಿ ಮಾಡಿದೆ.
*ಚಿಕಿತ್ಸಾ ವೆಚ್ಚ ಭರಿಸಲಿ, ದತ್ತು ಪಡೆಯಲಿ:*
ಲೈಸೊಸಮಲ್‌ ಸ್ಟೋರೇಜ್‌ ಡಿಸ್‌ ಆರ್ಡರ್‌ ಎಂಬ ಅಪರೂಪದ ಕಾಯಿಲೆ ಚಿಕಿತ್ಸೆಗೆ ತಗಲುವ ವೆಚ್ಚ ವರ್ಷಕ್ಕೆ 20-40 ಲಕ್ಷ ರೂ. ಕರ್ನಾಟಕದಲ್ಲಿ ಈ ರೀತಿಯ 22 ಮಕ್ಕಳಿದ್ದಾರೆ. ಇವರ ಚಿಕಿತ್ಸೆಗಾಗಿ ವಾರ್ಷಿಕ 12-13 ಕೋಟಿ ರೂ. ಅನುದಾನ ಅವಶ್ಯಕತೆ ಇರುತ್ತದೆ ಎಂದು ಅಂದಾಜಿಸಲಾಗಿದೆ. ಈ ದುಬಾರಿ ಕಾಯಿಲೆಯ ಚಿಕಿತ್ಸೆಗಾಗಿ ದೇಣಿಗೆ ನೀಡುವುದರ ಮೂಲಕ ಒಂದು ಮಗುವನ್ನು ಕಾರ್ಪೊರೇಟ್‌ ಸಂಸ್ಥೆಗಳು ದತ್ತು ತೆಗೆದುಕೊಳ್ಳಲಿ ಎಂಬುದು ಸಚಿವರ ಆಶಯ ಮತ್ತು ಮನವಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು