6:38 PM Thursday28 - August 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ

ಖೋಟಾ ನೋಟು ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

28/08/2025, 12:53

ಉಪ್ಪಿನಂಗಡಿ(reporterkarnataka.com): ಖೋಟಾ ನೋಟು ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಉಪ್ಪಿನಂಗಡಿ ಬಳಿ ಬಂಧಿಸಿದ್ದಾರೆ.
ಬಿ.ಸಿ ರೋಡ್ ನ ಜೋಡು ಮಾರ್ಗದ ತಲಪಾಡಿ ಹೌಸ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಬಂಧಿತ ಆರೋಪಿ. ಈತನ‌ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದು ನಂತರ ಪ್ರಕರಣಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ಮೇಲೆ 8 ಬಾರಿ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿತ್ತು. ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿಗಳು ಈತನನ್ನು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಮೇರೆಗೆ ಆಪಾದಿತನ ವಿರುದ್ಧ ಕಲಂ: 269 BNS-2023 ಪ್ರಕಾರ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು