6:25 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

02/09/2025, 20:58

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಧರ್ಮಸ್ಥಳದಲ್ಲಿ 12 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕುರಿತು ಆಕೆಯ ಮನೆಯವರು ಸುಪ್ರೀಂಕೋರ್ಟ್ ಮೊರೆ ಹೋಗುವುದಾದರೆ ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಮಂಗಳವಾರ ಅವರು ಧರ್ಮಸ್ಥಳದಿಂದ ಶಿಕಾರಿಪುರ ಹೋಗುವಾಗ ತೀರ್ಥಹಳ್ಳಿಯ ಮೇಲಿನಕುರುವಳ್ಳಿ ವಿದ್ಯಾಗಣಪತಿಗೆ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದರು.
ಸೌಜನ್ಯ ಹತ್ಯೆ ಪ್ರಕರಣ ನಡೆದು 12 ವರ್ಷಗಳು ಕಳೆದರೂ ನ್ಯಾಯ ಸಿಕ್ಕಿಲ್ಲ ಎಂಬ ನೋವು ಆ ಕುಟುಂಬದವರಿಗೂ ಇದೆ, ನಮ್ಮ ಕಾರ್ಯಕರ್ತರಿಗೂ ಇದೆ. ಬೇರೆ ಎಲ್ಲಾ ಹಿರಿಯರಿಗೂ ಇದೆ. ನಿನ್ನೆ ನಾವು ಅವರ ಕುಟುಂಬ ಸದಸ್ಯರನ್ನು ತಾಯಿಯನ್ನು ಭೇಟಿ ಮಾಡಿದ್ದೇವೆ. ಅವರು ಸಿಬಿಐ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ಗೆ ಹೋಗುವುದಾದರೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದೇವೆ. ಇದರಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ಪ್ರಾಮಾಣಿಕವಾಗಿ ರಾಜ್ಯಾಧ್ಯಕ್ಷನಾಗಿ ಅವರ ಅಹವಾಲನ್ನು ಧರ್ಮಸ್ಥಳದಲ್ಲಿ ಕೇಳುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಎಲ್ಲೋ ಒಂದು ಕಡೆ ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಕಳೆದ ಎರಡುವರೆ ವರ್ಷಗಳಿಂದ ನಿರಂತರವಾಗಿ ನಮ್ಮ ಹಿಂದೂಗಳ ಆಚಾರ ವಿಚಾರಗಳಿಗೆ ಧಕ್ಕೆ ತರುವಂತ ಬೆಳವಣಿಗೆಗಳು ನಡೆಯುತ್ತಿವೆ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ಮಾತನಾಡುವುದಾದರೆ ಅಸಂಖ್ಯಾತ ಭಕ್ತ ಸಮುದಾಯ ಹೊಂದಿರುವ ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರ ಆಗುತ್ತಿದ್ದರೂ ಸಹ ರಾಜ್ಯ ಸರ್ಕಾರಕ್ಕೆ ಕಡಿವಾಣ ಹಾಕುವಂತಹ ಮನಸ್ಸು ಇರಲಿಲ್ಲವಾ? ಇದು ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಪ್ರಚಾರ ಆಗುವುದನ್ನು ಒಂದು ರಾಷ್ಟ್ರೀಯ ಪಕ್ಷವಾಗಿ ಕಣ್ಣು ಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಹೇಳಿದರು.
ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ವಿರುದ್ಧ
ಧರ್ಮಸ್ಥಳ ಚಲೋ ಕರೆ ಕೊಟ್ಟಿದ್ದೆವು. ರಾಜ್ಯದ ಎಲ್ಲಾ ಕ್ಷೇತ್ರದಿಂದ ಸಾವಿರ ಸಾವಿರ ಜನರು ಬಂದಿದ್ದರು. ಬಹಳ ಯಶಸ್ವಿಯಾಗಿ ನಮ್ಮ ಹೋರಾಟ ನಡೆದಿದೆ. ರಾಜ್ಯ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಿದ್ದೇವೆ. ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ ಆಡಳಿತ ಚುಕ್ಕಾಣಿ ಹಿಡಿದಿರುವವರಿಗೆ ಭಗವಂತ ಸದ್ಬುದ್ಧಿ ಕೊಟ್ಟು ಹಿಂದೂಗಳನ್ನು ಕೆಣಕದೆ ದುಷ್ಟ ಶಕ್ತಿಗಳನ್ನು ಸಂಹಾರ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡ ಕ್ರಮ ಕೈಗೊಳ್ಳಬೇಕು ಎಂದರು.
ಧರ್ಮಸ್ಥಳ ಪ್ರಕರಣವನ್ನು ರಾಜ್ಯ ಸರ್ಕಾರ ಎನ್ ಐ ಎ ಅಥವಾ ಸಿಬಿಐಗೆ ಕೊಡಬೇಕು ಎಂದು ಆಗ್ರಹ ಮಾಡಿದ್ದೇವೆ.
ಇದು ಸಣ್ಣ ವಿಚಾರ ಅಲ್ಲ, ಕಳೆದ ಒಂದು ತಿಂಗಳಿನಿಂದ ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರ ಆಗಿರುವುದು ಅಷ್ಟಿಷ್ಟಲ್ಲ. ಭಕ್ತರ ಭಾವನೆಗೆ ಧಕ್ಕೆ ಬಂದಿದೆ. ಇದನ್ನು ಅರ್ಥ ಮಾಡಿಕೊಂಡು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಎಲ್ಲ ಧರ್ಮದ ಅಪೇಕ್ಷೆಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತಡ ಮಾಡದೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಬೇಕು. ಕೂಡಲೇ ಎನ್ಐ ಎ ಗೆ ತನಿಖೆಗೆ ನೀಡಬೇಕುಮ ಅಂತಾರಾಷ್ಟ್ರೀಯ ಮಟ್ಟದಲ್ಲೂ ಅಪಪ್ರಚಾರ ನಡೆಯುತ್ತಿದೆ. ಹಿಂದೂ ಮಂದಿರಗಳ ಬಗ್ಗೆ ನಮ್ಮ ಪುಣ್ಯ ಕ್ಷೇತ್ರದ ಬಗ್ಗೆ ಅಪಪ್ರಚಾರ ಆಗುತ್ತಿದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು