ಇತ್ತೀಚಿನ ಸುದ್ದಿ
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್ ಅಂಗೀಕಾರ
23/03/2026, 22:28
ನವದೆಹಲಿ(reporterkarnataka.com): ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ ಧರ್ಮಸ್ಥಳ ಪಾಂಗಾಳದ ಅಪ್ರಾಪ್ತ ವಯಸ್ಸಿನ ಬಾಲಕಿ ಸೌಜನ್ಯ ಅಪಹರಣ, ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಆಕೆಯ ತಾಯಿ ಸಲ್ಲಿಸಿದ್ದ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ.
ಈ ಸಂಬಂಧ ಸರಕಾರ ಹಾಗೂ ಸಿಬಿಐಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆ ಸೌಜನ್ಯ ಅವರ ತಾಯಿ ಕುಸುಮಾವತಿ ಅವರು
ಕರ್ನಾಟಕ ಹೈಕೋರ್ಟ್ ಗೆ ಸಲ್ಲಿಸಿದ್ದ ಮರು ತನಿಖೆ ಅರ್ಜಿಯನ್ನು ವಜಾಗೊಳಿಸಿತ್ತು, ಇದನ್ನು ಪ್ರಶ್ನಿಸಿ ಸೌಜನ್ಯ ಅವರ ತಾಯಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಈ ಹಿಂದೆ ಪ್ರಕರಣದ ಆರೋಪಿಯಾಗಿದ್ದ ಸಂತೋಷ್ ರಾವ್ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯವು ದೋಷಮುಕ್ತಗೊಳಿಸಿತ್ತು. ಈ ತೀರ್ಪಿನ ಬೆನ್ನಲ್ಲೇ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ಇದೀಗ ಸುಪ್ರೀಂ ಕೋರ್ಟ್ ಅರ್ಜಿಯನ್ನು ಪುರಸ್ಕರಿಸಿರುವುದು ಹೊಸ ಭರವಸೆ ಮೂಡಿಸಿದೆ.












