11:10 PM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಕೋವಿಡ್ 19; ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು ಪಾಲಿಸಿ: ಜಿಪಂ ಸಿಇಒ ಸೂಚನೆ

20/12/2023, 15:59

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಪ್ರಸ್ತುತ, ದೇಶದ ಕೋವಿಡ್-19ನ ಅಂಕಿ-ಅಂಶಗಳು, ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್ 19ನ ಉಪತಳಿ ಜೆ.ಎನ್.1 ವರದಿಯಾಗಿರುವುದು, ಚಳಿಗಾಲದ ಹವಾಮಾನ, ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆ, ಈ ಎಲ್ಲಾ ಅಂಶಗಳನ್ನು ಗಮನದಲ್ಲಿರಿಸಿಕೊಂಡು, ಕೋವಿಡ್ 19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು ಮಾಡಿರುವ ಸಲಹೆಗಳನ್ನು ಸಾರ್ವಜನಿಕರು ಪಾಲಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರಲು ಸಲಹೆ ನೀಡಲಾಗಿದೆ.
ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ. ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.
ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು/ದುರ್ಬಲರನ್ನು ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಿದರು.

ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು. ಹೆಚ್ಚಿನ ಗಾಳಿ ಬೆಳಕು ಇಲ್ಲದೆ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಪಾಲಿಸಬೇಕು ಎಂದರು.
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19ನ ಮುಂಜಾಗೃತಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಈ ಎಲ್ಲಾ ಅಂಶಗಳನ್ನು ಪಾಲನೆ ಮಾಡುವಂತೆ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು