ಇತ್ತೀಚಿನ ಸುದ್ದಿ
ಕೋವಿಡ್ ಗೈಡ್ ಲೈನ್ಸ್ ಉಲ್ಲಂಘಿಸಿ ಕಾರ್ಪೊರೇಟರ್ ಪುತ್ರಿಯ ಮದುವೆ ಸೇರಿದಂತೆ 4 ಜೋಡಿಗಳ ವಿವಾಹ: ಎಫ್ ಐಆರ್ ದಾಖಲು
20/06/2021, 15:35
ಮಂಗಳೂರು(reporterkarnataka news): ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಭಾನುವಾರ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಎಫ್ ಐಆರ್ ದಾಖಲಿಸಲಾಗಿದೆ.
ಮಂಗಳೂರು ಮಹಾನಗರಪಾಲಿಕೆಯ ನಾಮನಿರ್ದೇಶಿತ ಸದಸ್ಯ ಭಾಸ್ಕರ ಚಂದ್ರ ಶೆಟ್ಟಿ ಅವರ ಪುತ್ರಿಯ ಮದುವೆ ಸೇರಿದಂತೆ ನಾಲ್ಕು ಜೋಡಿ ಮದುವೆಗೆ ಏರ್ಪಾಡು ಮಾಡಲಾಗಿತ್ತು. ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಹಾಲ್ ನಲ್ಲಿ ಮದುವೆಗೆ ವ್ಯವಸ್ಥೆ ಮಾಡಲಾಗಿತ್ತು. ವಿವಾಹ ಸಮಾರಂಭದಲ್ಲಿ ಸುಮಾರು 200 ಮಂದಿ ಪಾಲ್ಗೊಂಡಿದ್ದರು. ಕೋವಿಡ್ ಗೈಡ್ ಲೈನ್ಸ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಮುಜರಾಯಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.