12:31 PM Thursday15 - May 2025
ಬ್ರೇಕಿಂಗ್ ನ್ಯೂಸ್
ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ…

ಇತ್ತೀಚಿನ ಸುದ್ದಿ

ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂಬುದನ್ನು ಹೇಳಲಿ: ಶಾಸಕ ವೇದವ್ಯಾಸ ಕಾಮತ್

01/04/2022, 17:20

ಮಂಗಳೂರು(reporterkarnataka.com)

ಹಿಂದು ಸಂಘಟನೆಯ ಕಾರ್ಯಕರ್ತರು ಕೋವಿಡ್ ಸಂದರ್ಭದಲ್ಲಿ ಏನು ಮಾಡಿದ್ದಾರೆ ಎನ್ನುವುದರ ದಾಖಲೆಕೊಡುತ್ತೇನೆ. ಆದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆ ಸಂದರ್ಭದಲ್ಲಿ ಸಮಾಜಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ಹೇಳಲಿ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. 

ಆರೆಸ್ಸೆಸ್, ವಿಶ್ವ ಹಿಂದೂ ಪರಿಷತ್, ಬಜರಂಗದಳ‌, ಹಿಂದೂ ಜಾಗರಣಾ ವೇದಿಕೆ ಸೇರಿದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕೋವಿಡ್ ಸಂದರ್ಭದಲ್ಲಿ ಎಲ್ಲಿದ್ದರು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಕಾಮತ್, ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ, ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಕೋವಿಡ್ ಸಂದರ್ಭದಲ್ಲಿ ಜನರ ನಡುವೆ ಕೆಲಸ ಮಾಡುತ್ತಿದ್ದರು. ಆದರೆ ಆ ಸಂದರ್ಭದಲ್ಲಿ ಕುಮಾರಸ್ವಾಮಿಯವರು ಎಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ. 

ಬಜರಂಗದಳ ಕಾರ್ಯಕರ್ತರು ಕೋವಿಡ್ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಅಸಹಾಯಕರಿಗೆ ಸಹಾಯ ಮಾಡಿದ್ದಾರೆ. ಕೋವಿಡ್ ಸೋಂಕಿತರ ಶವ ಮುಟ್ಟಲು ಮನೆಯವರು ಹಿಂಜರಿದಂತಹ ಸಂದರ್ಭದಲ್ಲಿ 400ಕ್ಕೂ ಅಧಿಕ ಶವಗಳ ಅಂತ್ಯ ಸಂಸ್ಕಾರ ಮಾಡುವ ಮೂಲಕ ಜಿಲ್ಲಾಡಳಿತದೊಂದಿಗೆ ಕಾರ್ಯ ನಿರತರಾಗಿದ್ದರು. ಯಾರನ್ನೋ ಓಲೈಸಲು ಮಾಜಿ ಮುಖ್ಯಮಂತ್ರಿ‌ ಕುಮಾರಸ್ವಾಮಿಯವರು ಇಂತಹ ಹೇಳಿಕೆ ನೀಡುವುದು ಸರಿಯಲ್ಲ.

ಮಂಗಳೂರಿನಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತಿದ್ದಾಗ ಆರ್.ಎಸ್.ಎಸ್ ಹಾಗೂ ಪರಿವಾರ ಸಂಘಟನೆಯ ಕಾರ್ಯಕರ್ತರು ಹೆಲ್ಪ್ ಲೈನ್ ತೆರೆದು ಅವಶ್ಯಕತೆ ಉಳ್ಳವರಿಗೆ ನೆರವಾಗಿದ್ದಾರೆ. ಉಚಿತ ಆಂಬ್ಯುಲೆನ್ಸ್ ಸೇವೆ, ಐಸೋಲೇಷನ್ ಸೆಂಟರ್, ರಕ್ತದ ಅವಶ್ಯಕತೆಯಿರುವಾಗ 2847 ಯುನಿಟ್ ರಕ್ತದ ವ್ಯವಸ್ಥೆ, ತುರ್ತಾಗಿ ಆಕ್ಸಿಜನ್ ಪೂರೈಕೆ, ಸಾವಿರಾರು ಜನರಿಗೆ ಊಟದ‌ ವ್ಯವಸ್ಥೆ, 16 ಸಾವಿರ ಕುಟುಂಬಗಳಿಗೆ ರೇಷನ್ ಕಿಟ್, 552 ಜನರಿಗೆ ಔಷಧ ವಿತರಣೆ ಸೇರಿದಂತೆ ಅನೇಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಕೋವಿಡ್ ಸಂಕಷ್ಟದ ಕಾಲದಲ್ಲಿ ಕುಮಾರಸ್ವಾಮಿಯವರು ಹೇಳಿಕೆ, ಪುಕ್ಕಟ್ಟೆ ಸಲಹೆಗಳನ್ನು ಕೊಡುವುದಲ್ಲದೆ ಬೇರೆ ಏನು ಮಾಡಿದ್ದಾರೆ. ಸಂಘಟನೆಯ ಕಾರ್ಯಕರ್ತರು ಹಗಲು ಇರುಳೆನ್ನದೆ ಸಮಾಜದ ನಡುವೆ ಸೇವೆ ಮಾಡಿ ಅನೇಕ ಕಾರ್ಯಕರ್ತರು ಕೋವಿಡ್ ಸೋಂಕಿಗೂ ಒಳಗಾಗಿದ್ದಾರೆ. ಇವೆಲ್ಲದರ ದಾಖಲೆ ಬೇಕಿದ್ದರೆ ಕುಮಾರಸ್ವಾಮಿ ಅವರಿಗೆ ಕೊಡುತ್ತೇವೆ. ಹಾಗೆಯೇ ಕುಮಾರಸ್ವಾಮಿಯವರು ಏನು ಮಾಡಿದ್ದಾರೆ ಎನ್ನುವುದನ್ನೂ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು