9:21 PM Tuesday12 - November 2024
ಬ್ರೇಕಿಂಗ್ ನ್ಯೂಸ್
ಕಾಫಿನಾಡಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ?: ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಆರಂಭ ಗಣಿ ಮಾಫಿಯಾ, ಹಣದ ಶಕ್ತಿ, ಸುಳ್ಳು ಪ್ರಚಾರದಿಂದ ರಕ್ಷಿಸಲು ಮತ ಚಲಾಯಿಸಿ: ಗೋಪಿನಾಥ್… ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ ಎಜ್ಯುಟೆಕ್ ಸ್ಟಾರ್ಟ್ ಅಪ್ ಭಾಂಜು ವಿಶ್ವಾದ್ಯಂತ ವಿಸ್ತರಿಸಲು ಸರಣಿ ಬಿ ನಿಧಿಯಡಿ 16.5… ಕಲ್ಲಡ್ಕದಲ್ಲಿ ರಾಜ್ಯಮಟ್ಟದ ಕನ್ನಡ ಶಾಲೆಗಳಿಗೆ ಸಮ್ಮಾನ; ಮಾತೃ ಭಾಷೆಗೆ ಪ್ರಾಧಾನ್ಯ ಸಿಗಬೇಕು: ಸಿ.ಎ.ಶಾಂತಾರಾಮ… ಮರಾಟಿಗರ ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ಮೂಡುಬಿದಿರೆಯಲ್ಲಿ ಸಮಾವೇಶ ಉದ್ಘಾಟಿಸಿ ಸಚಿವ… ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1ರಿಂದ 2 ಲಕ್ಷಕ್ಕೆ… ಕೋವಿಡ್‌; ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಭ್ರಷ್ಟಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಕೋವಿಡ್ ಹಗರಣದ ಕುರಿತು ರಾಜಕೀಯ ‌ದ್ವೇಷಕ್ಕೆ ಪ್ರಾಸಿಕ್ಯೂಶನ್ ಅನುಮತಿ: ಯಡಿಯೂರಪ್ಪ ಹಣಗೆರೆಕಟ್ಟೆ ದೇವಸ್ಥಾನದ ಹಣ ಏರುಪೇರು ಆಗಿದ್ದು ಹೇಗೆ!?: ದೇವರ ಹಣದ ಲೆಕ್ಕ ಪಕ್ಕಾ…

ಇತ್ತೀಚಿನ ಸುದ್ದಿ

ಕೋವಿಡ್‌; ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಭ್ರಷ್ಟಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

09/11/2024, 22:36

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ನ್ಯಾ.ಮೈಕೆಲ್ ಡಿ ಕುನ್ಹಾ ಅವರ ತನಿಖಾ ಆಯೋಗ ಶಿಫಾರಸು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಸಂಡೂರು ವಿಧಾನಸಭಾ ಕ್ಷೇತ್ರದ ಮೆಟ್ರಿಕಿ ಗ್ರಾಮದಲ್ಲಿ ನಡೆದ ಬೃಹತ್ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಇಡೀ ರಾಜ್ಯದ ಜನತೆ ಭಯ, ಆತಂಕದಲ್ಲಿ ದೇವರ ಪ್ರಾರ್ಥನೆ ಮಾಡುತ್ತಿದ್ದಾಗ ಕರ್ನಾಟಕ ಬಿಜೆಪಿ ಸರ್ಕಾರ ಮತ್ತು ಸಚಿವ ಶ್ರೀರಾಮುಲು ಅವರು ಹಣ ಲೂಟಿ ಮಾಡುವುದರಲ್ಲಿ ಮುಳುಗಿದ್ದರು. ಮುಗ್ಧ ಜನರ ಮೃತದೇಹಗಳ ಹೆಸರಲ್ಲೂ ಭ್ರಷ್ಟಚಾರ ನಡೆಸಿದ ಬಿಜೆಪಿ ನಾಯಕರನ್ನು ಯಾವ ದೇವರೂ ಕ್ಷಮಿಸಲ್ಲ, ನೀವೂ ಕ್ಷಮಿಸಬೇಡಿ.
ಬಿಜೆಪಿ ಶ್ರೀಮಂತರ ಮತ್ತು ಮೇಲ್ವರ್ಗದವರ ಪಕ್ಷ. ಕಾಂಗ್ರೆಸ್ ಜಾರಿ ಮಾಡುವ ಎಲ್ಲಾ ಬಡವರ ಪರವಾದ ಕಾರ್ಯಕ್ರಮಗಳನ್ನು ವಿರೋಧಿಸುತ್ತದೆ. ಅಪಪ್ರಚಾರ ಮಾಡುತ್ತದೆ. ಆಗ ಇಂದಿರಾ ಗಾಂಧಿಯವರ 20 ಅಂಶಗಳ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸಿ ಅಪಪ್ರಚಾರ ಮಾಡಿತ್ತು. ಈಗ ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳನ್ನು ವಿರೋಧಿಸಿ ಅಪಪ್ರಚಾರ ಮಾಡುತ್ತಿದೆ. ಇದೇ ಬಿಜೆಪಿಯ ಜಾಯಮಾನ ಎಂದರು.
ಕರ್ನಾಟಕ ಬಿಜೆಪಿ ರೈತರು, ಕಾರ್ಮಿಕರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ದಲಿತರು, ಹಿಂದುಳಿದವರ ಪರವಾಗಿ ಒಂದೇ ಒಂದು ಕಾರ್ಯಕ್ರಮ ಕೊಟ್ಟಿದ್ದರೆ ನೆನಪಿಸಿಕೊಂಡು ಹೇಳಿ ನೋಡೋಣ. ಯಾವ ಕಾರ್ಯಕ್ರಮವನ್ನೂ ಕೊಟ್ಟಿಲ್ಲ. ಅದಕ್ಕೇ ನಿಮಗೆ ನೆನಪಾಗಲು ಸಾಧ್ಯವೇ ಇಲ್ಲ. ಸಂಡೂರಿನಲ್ಲಿರುವ ರಸ್ತೆ, ಶಾಲೆ, ವಸತಿ ಶಾಲೆ, ಅಂಗನವಾಡಿ, ಆಸ್ಪತ್ರೆ, ನೀರು, ನೀರಾವರಿ ಎಲ್ಲವೂ ಆಗಿರುವುದು ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ. ಬಿಜೆಪಿಯವರು ಕೇವಲ ಸುಳ್ಳು ಹೇಳಿಕೊಂಡು, ಜನರ ನಡುವೆ ದ್ವೇಷ ಬಿತ್ತುತ್ತಾ ರಾಜಕಾರಣ ಮಾಡುತ್ತಿದ್ದಾರೆ.
ಹಿಂದೆ ಜನಾರ್ದನ ರೆಡ್ಡಿಯವರ ಟೀಮು ನಡೆಸಿದ್ದ ಭ್ರಷ್ಟಾಚಾರವನ್ನು ಲೋಕಾಯುಕ್ತ ಸಂತೋಷ್ ಹೆಗ್ಡೆಯವರು ಬಯಲಿಗೆ ಎಳೆದಿದ್ದರು. ಇವರು ಅಧಿಕಾರಕ್ಕೆ ಬರೋದೇ ಲೂಟಿ ಮಾಡೋದಕ್ಕೆ. ಆದ್ದರಿಂದ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಮ್ ಅವರನ್ನು ಗೆಲ್ಲಿಸಿ ಅಭಿವೃದ್ಧಿಗೆ ನಿಮ್ಮ ಬೆಂಬಲ ನೀಡಿ ಎಂದು ಸಿದ್ದರಾಮಯ್ಯ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು