4:28 AM Tuesday3 - December 2024
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಸಾವು ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು ತುಮಕೂರು: ಭೀಕರ ರಸ್ತೆ ಅಪಘಾತ; 3 ಮಂದಿ ಮಹಿಳೆಯರ ದಾರುಣ ಸಾವು ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ ಫೆಂಗಲ್ ಚಂಡಮಾರುತ: ದ.ಕ., ಉಡುಪಿ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜಿಗಳಿಗೆ ನಾಳೆ… ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವೈಭವದ ಲಕ್ಷದೀಪೋತ್ಸವ ಸಂಪನ್ನ: ದಾಖಲೆ ಸಂಖ್ಯೆಯಲ್ಲಿ ನೆರೆದ… ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಕಮಿಷನರ್ ವರ್ಗಾಯಿಸಿ: ಪ್ರತಿಭಟನೆಯಲ್ಲಿ ಮುನೀರ್ ಕಾಟಿಪಳ್ಳ… ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು…

ಇತ್ತೀಚಿನ ಸುದ್ದಿ

ಕೋವಿಡ್‌; ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಭ್ರಷ್ಟಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

09/11/2024, 22:36

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ನ್ಯಾ.ಮೈಕೆಲ್ ಡಿ ಕುನ್ಹಾ ಅವರ ತನಿಖಾ ಆಯೋಗ ಶಿಫಾರಸು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಸಂಡೂರು ವಿಧಾನಸಭಾ ಕ್ಷೇತ್ರದ ಮೆಟ್ರಿಕಿ ಗ್ರಾಮದಲ್ಲಿ ನಡೆದ ಬೃಹತ್ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಇಡೀ ರಾಜ್ಯದ ಜನತೆ ಭಯ, ಆತಂಕದಲ್ಲಿ ದೇವರ ಪ್ರಾರ್ಥನೆ ಮಾಡುತ್ತಿದ್ದಾಗ ಕರ್ನಾಟಕ ಬಿಜೆಪಿ ಸರ್ಕಾರ ಮತ್ತು ಸಚಿವ ಶ್ರೀರಾಮುಲು ಅವರು ಹಣ ಲೂಟಿ ಮಾಡುವುದರಲ್ಲಿ ಮುಳುಗಿದ್ದರು. ಮುಗ್ಧ ಜನರ ಮೃತದೇಹಗಳ ಹೆಸರಲ್ಲೂ ಭ್ರಷ್ಟಚಾರ ನಡೆಸಿದ ಬಿಜೆಪಿ ನಾಯಕರನ್ನು ಯಾವ ದೇವರೂ ಕ್ಷಮಿಸಲ್ಲ, ನೀವೂ ಕ್ಷಮಿಸಬೇಡಿ.
ಬಿಜೆಪಿ ಶ್ರೀಮಂತರ ಮತ್ತು ಮೇಲ್ವರ್ಗದವರ ಪಕ್ಷ. ಕಾಂಗ್ರೆಸ್ ಜಾರಿ ಮಾಡುವ ಎಲ್ಲಾ ಬಡವರ ಪರವಾದ ಕಾರ್ಯಕ್ರಮಗಳನ್ನು ವಿರೋಧಿಸುತ್ತದೆ. ಅಪಪ್ರಚಾರ ಮಾಡುತ್ತದೆ. ಆಗ ಇಂದಿರಾ ಗಾಂಧಿಯವರ 20 ಅಂಶಗಳ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸಿ ಅಪಪ್ರಚಾರ ಮಾಡಿತ್ತು. ಈಗ ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳನ್ನು ವಿರೋಧಿಸಿ ಅಪಪ್ರಚಾರ ಮಾಡುತ್ತಿದೆ. ಇದೇ ಬಿಜೆಪಿಯ ಜಾಯಮಾನ ಎಂದರು.
ಕರ್ನಾಟಕ ಬಿಜೆಪಿ ರೈತರು, ಕಾರ್ಮಿಕರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ದಲಿತರು, ಹಿಂದುಳಿದವರ ಪರವಾಗಿ ಒಂದೇ ಒಂದು ಕಾರ್ಯಕ್ರಮ ಕೊಟ್ಟಿದ್ದರೆ ನೆನಪಿಸಿಕೊಂಡು ಹೇಳಿ ನೋಡೋಣ. ಯಾವ ಕಾರ್ಯಕ್ರಮವನ್ನೂ ಕೊಟ್ಟಿಲ್ಲ. ಅದಕ್ಕೇ ನಿಮಗೆ ನೆನಪಾಗಲು ಸಾಧ್ಯವೇ ಇಲ್ಲ. ಸಂಡೂರಿನಲ್ಲಿರುವ ರಸ್ತೆ, ಶಾಲೆ, ವಸತಿ ಶಾಲೆ, ಅಂಗನವಾಡಿ, ಆಸ್ಪತ್ರೆ, ನೀರು, ನೀರಾವರಿ ಎಲ್ಲವೂ ಆಗಿರುವುದು ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ. ಬಿಜೆಪಿಯವರು ಕೇವಲ ಸುಳ್ಳು ಹೇಳಿಕೊಂಡು, ಜನರ ನಡುವೆ ದ್ವೇಷ ಬಿತ್ತುತ್ತಾ ರಾಜಕಾರಣ ಮಾಡುತ್ತಿದ್ದಾರೆ.
ಹಿಂದೆ ಜನಾರ್ದನ ರೆಡ್ಡಿಯವರ ಟೀಮು ನಡೆಸಿದ್ದ ಭ್ರಷ್ಟಾಚಾರವನ್ನು ಲೋಕಾಯುಕ್ತ ಸಂತೋಷ್ ಹೆಗ್ಡೆಯವರು ಬಯಲಿಗೆ ಎಳೆದಿದ್ದರು. ಇವರು ಅಧಿಕಾರಕ್ಕೆ ಬರೋದೇ ಲೂಟಿ ಮಾಡೋದಕ್ಕೆ. ಆದ್ದರಿಂದ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಮ್ ಅವರನ್ನು ಗೆಲ್ಲಿಸಿ ಅಭಿವೃದ್ಧಿಗೆ ನಿಮ್ಮ ಬೆಂಬಲ ನೀಡಿ ಎಂದು ಸಿದ್ದರಾಮಯ್ಯ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು