9:01 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕೋಝಿಕ್ಕೋಡ್‍: ಶಬರಿಮಲೆ ಪ್ರವೇಶಿಸಿದ್ದ ಬಿಂದು ಮೇಲೆ ನಡು ರಸ್ತೆಯಲ್ಲಿ ದಾಳಿ;  ಆರೋಪಿ ಬಂಧನ

07/01/2022, 01:23

ತಿರುವನಂತಪುರಂ(reporterkarnataka.com): ಶಬರಿಮಲೆ ದೇಗುಲ ಪ್ರವೇಶಿಸಿದ ಮೊದಲ ಮಹಿಳೆ ಬಿಂದು ಮೇಲೆ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದಾನೆ.

2018 ರಲ್ಲಿ ಶಬರಿಮಲೆ ದೇವಾಲಯವನ್ನು ಪ್ರವೇಶಿಸಿದ ಮೊದಲ ಮಹಿಳೆ ದಲಿತ ಕಾರ್ಯಕರ್ತೆ ಬಿಂದು ಅಮ್ಮಿಣಿ ಅವರ ಮೇಲೆ ಉತ್ತರ ಕೇರಳದ ಕೋಝಿಕ್ಕೋಡ್‍ನಲ್ಲಿ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೋಹನ್ ದಾಸ್ ಬಂಧಿತ ಆರೋಪಿ. ಪೊಲೀಸ್ ಠಾಣೆಗೆ ಶರಣಾಗಲು ತೆರಳುತ್ತಿದ್ದ ವೇಳೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವೇಳೆ ಹಲ್ಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಅಮ್ಮಿಣಿ ಅವರು ಪೊಲೀಸರಿಗೆ ದೂರು ನೀಡಿದ್ದು, ಸಮುದ್ರತೀರದಲ್ಲಿ RSS ಬೆಂಬಲಿತ ವ್ಯಕ್ತಿಯೊಬ್ಬ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ. ರಸ್ತೆಯಲ್ಲಿ ನಾನು ನೆಲಕ್ಕೆ ಬೀಳುವವರೆಗೂ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ದಾಖಲಿಸಿದ್ದಾರೆ.


ಈ ಕುರಿತು ಪ್ರತಿಕ್ರಿಯಿಸಿದ ಅಮ್ಮಿಣಿ ಅವರು, ಇದು ನನ್ನ ಮೇಲೆ ಮೊದಲ ಬಾರಿ ನಡೆಯುತ್ತಿರುವ ದಾಳಿಯಲ್ಲ. ನನ್ನನ್ನು ಹಿಂದೂ ಸಂಘಟನೆಗಳು ಯಾವಾಗಲೂ ಗುರಿಯಾಗಿಸಿಕೊಂಡಿದೆ. ಕಳೆದ ತಿಂಗಳು ಆಟೋ ಚಾಲಕನೊಬ್ಬ ನನ್ನ ಮೇಲೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದ. ಈ ಪರಿಣಾಮ ನಾನು ಆಸ್ಪತ್ರೆಯಲ್ಲಿ ದಾಖಲಾಗಿದ್ದೆ ಎಂದಿದ್ದಾರೆ.

ವಕೀಲರೊಬ್ಬರನ್ನು ಸಂಪರ್ಕಿಸಲು ನಾನು ಸಮುದ್ರತೀರಕ್ಕೆ ಬಂದಿದ್ದೆ. ಆದರೆ ಇದ್ದಕ್ಕಿದ್ದಂತೆ ಒಬ್ಬ ವ್ಯಕ್ತಿ ಬಂದು ನನ್ನ ಬೈಕ್ ಅನ್ನು ತಡೆದಿದ್ದು, ನನ್ನ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿದ. ಸ್ಥಳದಲ್ಲಿದ್ದ ಜನರು ಬಂದಾಗ ಆತ ಅಲ್ಲಿಂದ ಓಡಿ ಹೋದ. ನನ್ನ ಮೇಲೆ ಬೇಕೆಂದು ಈ ದಾಳಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ದಾಳಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಅಮ್ಮಣಿ ಅವರಿಗೆ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ಆದರೆ ನಂತರ ಅದನ್ನು ಹಿಂಪಡೆಯಲಾಯಿತು.
ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳಾ ಭಕ್ತರು ಪ್ರವೇಶ ಪಡೆಯಬಹುದು ಎಂದು ಆದೇಶ ನೀಡಿದ ಹಿನ್ನೆಲೆಯಲ್ಲಿ 2 ಜನವರಿ 2019 ರಂದು ಮೊದಲ ಬಾರಿಗೆ ಬಿಂದು ಅಮ್ಮಣಿ ಅವರು ದೇವಾಲಯವನ್ನು ಪ್ರವೇಶಿಸಿದ್ದರು. ಮಹಿಳೆಯರು ದೇವಾಲಯ ಪ್ರವೇಶಿಸಿದ ಕೆಲವೇ ಗಂಟೆಗಳಲ್ಲಿ ದೇವಾಲಯದ ಜಾಗವು ಯುದ್ಧರಂಗವಾಗಿ ಮಾರ್ಪಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು