11:19 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಕ್ರೆಡಲ್ ನಿಂದ 40.53 ಕೋಟಿ ಲಾಭಾಂಶ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಸ್ತಾಂತರ

02/01/2025, 21:32

ಬೆಂಗಳೂರು(reporterkarnataka.com): ಕ್ರೆಡಲ್‌ ಸಂಸ್ಥೆಯು 2023-24ನೇ ಸಾಲಿನಲ್ಲಿ ಗಳಿಸಿದ್ದ 40,53,59,320 ರೂ. ಲಾಭಾಂಶವನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಅರ್ಪಿಸಿದರು.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್‌) 2023-24ನೇ ಸಾಲಿನಲ್ಲಿ ಗಳಿಸಿದ್ದ 135.12 ಕೋಟಿ ರೂ. ಮೊತ್ತದ ನಿವ್ವಳ ಲಾಭದ ಮೇಲೆ ಶೇ.30 ಲಾಭಾಂಶ (ಡಿವಿಡೆಂಡ್) 40,53,59,320 ರೂ. ಮೊತ್ತದ ಚೆಕ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಕಚೇರಿಯಲ್ಲಿ ಸ್ವೀಕರಿಸಿದರು.
ಇದೇ ವೇಳೆ ಕ್ರೆಡಲ್ ವತಿಯಿಂದ ಮಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಸಕರು, ಕ್ರೆಡಲ್ ಅಧ್ಯಕ್ಷರಾದ ಟಿ.ಡಿ. ರಾಜೇಗೌಡ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಉಪಸ್ಥಿತರಿದ್ದರು.
2024ರ ಅಕ್ಟೋಬರ್‌ನಲ್ಲಿ ನಡೆದ ಕ್ರೆಡಲ್‌ನ 106ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ 2023-24ನೇ ಸಾಲಿನ ಲೆಕ್ಕಪತ್ರಗಳನ್ನು ಮಂಡಿಸಿತ್ತು. 2024ರ ಆಗಸ್ಟ್‌ನಲ್ಲಿ ನಡೆದ 105ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಧನ ಸಹಾಯ ನೀಡಲು ಅನುಮೋದಿಸಲಾಗಿತ್ತು. ಡಿಸೆಂಬರ್‌ನಲ್ಲಿ ನಡೆದ ಶೇರುದಾರರ 28ನೇ ಸಾಮಾನ್ಯ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು