11:15 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಕ್ರಿಕೆಟ್ ಆಟವಾಡಿ ಕ್ರೀಡಾಂಗಣದಲ್ಲಿ ಕುಳಿತ ಪಶುವೈದ್ಯ ಕುಸಿದು ಬಿದ್ದು ಸಾವು; ಹೃದಯಾಘಾತಕ್ಕೆ ಬಲಿ

12/01/2024, 23:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪಶುವೈದ್ಯ ಇಲಾಖೆಯ ವಿಭಾಗ ಮಟ್ಟದ ಕ್ರಿಕೆಟ್ ಕ್ರೀಡಾಕೂಟಕ್ಕೆ ಆಗಮಿಸಿದ್ದ ಪಶುವೈದ್ಯ ಒಬ್ಬರು ಕ್ರೀಡಾಂಗಣದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆಯ ಪಶುವೈದ್ಯರಾದ ಶಿವಪ್ಪ ಬಾದಾಮಿ (56) ಮೃತ ದುರ್ದೈವಿ.
ಚಿಕ್ಕಮಗಳೂರು ನಗರದ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿ ವೇಳೆ ಈ ದುರ್ಘಟನೆ ಸಂಭವಿಸಿದೆ.
ಪಶುವೈದ್ಯ ಶಿವಪ್ಪ ಬಾದಾಮಿ ಕ್ರಿಕೆಟ್ ಆಡಿ ನಂತರ ಕ್ರೀಡಾಂಗಣದಲ್ಲಿ ಕುಳಿತು ಕ್ರಿಕೆಟ್ ನೋಡುತ್ತಿದ್ದು ಅಲ್ಲಿಯೇ ಕುಸಿದು ಬಿದ್ದಿದ್ದಾರೆ.
ಸ್ಥಳದಲ್ಲಿದ್ದ ಇತರೆ ವೈದ್ಯರು ಚಿಕಿತ್ಸೆಗೆ ಮುಂದಾದರೂ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬಾದಾಮಿ ಪ್ರಾಣ ಪಕ್ಷಿ ಹಾರಿ ಹೋಗಿದೆ.
ಬಾದಾಮಿಯವರ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ.
ಚಿಕ್ಕಮಗಳೂರು ಪಶುವೈದ್ಯ ಸಂಘ ಆಯೋಜಿಸಿದ್ದ ಮೈಸೂರು ವಿಭಾಗ ಮಟ್ಡದ ಪಶುವೈದ್ಯರ ಕ್ರೀಡಾ ಕೂಟದಲ್ಲಿ ಏಳು ಜಿಲ್ಲೆಗಳ 12 ಕ್ರಿಕೆಟ್ ತಂಡಗಳು ಭಾಗವಹಿಸಿದ್ದವು. ಮೃತ ಶಿವಪ್ಪ ಬಾದಾಮಿ ಕೊಡಗು ಜಿಲ್ಲೆ ತಂಡವನ್ನು ಪ್ರತಿನಿಧಿಸಿದ್ದರು. ಇಂದಿನಿಂದ ಎರಡು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಇಂದು ಕೊಡಗು ಪರವಾಗಿ ಒಂದು ಪಂದ್ಯವಾಡಿದ್ದ ಶಿವಪ್ಪ ಬಾದಾಮಿ ನಂತರ ಕ್ರೀಡಾಂಗಣದಲ್ಲಿ ಕುಳಿತು ಇತರೆ ಪಂದ್ಯಗಳನ್ನು ವೀಕ್ಷಿಸುತ್ತಿದ್ದರು.
ಮ್ಯಾಚ್ ನಲ್ಲಿ ಉತ್ಸಾಹದಿಂದ ಆಡಿ ನಂತರ ಕುಳಿತಿದ್ದ ಶಿವಪ್ಪ ಬಾದಾಮಿ ಅಕಾಲಿಕ ಮರಣಕ್ಕೆ ಪಶುವೈದ್ಯ ಲೋಕದ ಕಂಬನಿ ಮಿಡಿದಿದೆ. ನಂತರ ಕ್ರೀಡಾಕೂಟ ಸ್ಥಗಿತಗೊಳಿಸಲಾಯಿತು.
ಮೃತ ಶಿವಪ್ಪ ಬಾದಾಮಿ ಮೂಲತಃ ಬೆಳಗಾವಿ ಜಿಲ್ಲೆಯವರು ಎಂದು ತಿಳಿದುಬಂದಿದ್ದು, ಕೆಲ ವರ್ಷಗಳಿಂದ ಅವರು ಕೊಡಗು ಜಿಲ್ಲೆಯ ಪಶುವೈದ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು