7:43 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕ್ರಿಕೆಟ್ ಬೆಟ್ಟಿಂಗ್: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಜೂಜಾಟವಾಡುತ್ತಿದ್ದ ಇಬ್ಬರ ಬಂಧನ

15/10/2023, 22:04

ಮಂಗಳೂರು( reporterkarnataka.com):ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತರನ್ನು ಚೇಳ್ಯಾರು ನಿವಾಸಿ ದೀಪಕ್(33) ಹಾಗೂ
ಮರಕಡ ಪಂಜಗುತ್ತು ಮನೆ ಸಂದೀಪ್ ಶೆಟ್ಟಿ(38) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನಲ್ಲಿ ಅದೃಷ್ಠದ ಆಟವಾದ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಾ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿಕೊಂಡು ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿದ್ದರು. ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ರೂ. 31,000 ರೂ‌. ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000/- ಆಗಬಹುದು. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿರುತ್ತದೆ. ಈ ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಪ್ರಕರಣದ ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು