9:45 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

Crime News | ದೇಗುಲ ವಠಾರದಲ್ಲಿ ಚಿನ್ನಾಭರಣ ಕಳವು ಪ್ರಕರಣ: ತಾಯಿ- ಮಗಳ ಬಂಧನ; 5.32 ಲಕ್ಷ ಮೌಲ್ಯದ ಚಿನ್ನಾಭರಣ ವಶ

26/11/2025, 21:44

ಬೆಳ್ತಂಗಡಿ(reporterkarnataka.com); ಶ್ರೀ ಕ್ಷೇತ್ರ ದೇವಸ್ಥಾನ ವಠಾರದಲ್ಲಿ ನಡೆದ
ಚಿನ್ನಾಭರಣ ಕಳವು ಪ್ರಕರಣ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ
5.32 ಲಕ್ಷ ರೂ. ಮೌಲ್ಯದ 76 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ಹುಬ್ಬಳ್ಳಿ ನಗರದ ಸಟಲ್ಮೆಂಟ್ ನಿವಾಸಿ ಬಿ.ಬಿ.ಜಾನ್(59) ಮತ್ತು ಆಕೆಯ ಮಗಳು ಆರತಿ ಅಲಿಯಾಸ್ ಮಸಾಬಿ ಅಲಿಯಾಸ್ ಅಸ್ಮಾ (34) ಎಂದು ಗುರುತಿಸಲಾಗಿದೆ.
ಮೇ 3ರಂದು ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿರುವ ಲತಾ ಎಂಬುವರ ಬ್ಯಾಗ್ ನಲ್ಲಿ ಇರಿಸಿದ್ದ 6,79,000ರೂಪಾಯಿ ಮೌಲ್ಯದ 97ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ 17-2025 ಕಲಂ 303(2) BNS 2023 ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿ ಆರೋಪಿಗಳಾದ ಬಿ.ಬಿ.ಜಾನ್ ಮತ್ತು ಆಕೆಯ ಮಗಳು ಆರತಿ
ಎಂಬವರನ್ನು ನ.23ರಂದು ಮತ್ತೆ ಕಳ್ಳತನ ಮಾಡಲು ಬರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳದ ದ್ವಾರದ ಬಳಿ ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣ ಪತ್ತೆ ಕಾರ್ಯದಲ್ಲಿ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ ನಿರೀಕ್ಷಕರು ಬಿ ಜಿ ಸುಬ್ಬಪುರ್ ಮಠ್ ರವರ ತಂಡದಲ್ಲಿ ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕರು ಸಮರ್ಥ್ ಆರ್ ಗಾಣಿಗೇರ, ಸಿಬ್ಬಂದಿ ಹೆಚ್ ಸಿ ರಾಜೇಶ್, ಹೆಚ್ ಸಿ ಪ್ರಶಾಂತ್, ಹೆಚ್ ಸಿ ಸಂದೀಪ್, ಪಿಸಿ ಮಲ್ಲಿಕಾರ್ಜುನ್, ಪಿಸಿ ಶಶಿಕುಮಾರ್, ಪಿಸಿ ಮಂಜುನಾಥ್ ಪಾಟೀಲ್, ಮಹೆಚ್ ಸಿ ಪ್ರಮೋದಿನಿ, ಮಹೆಚ್ ಸಿ ಸುನಿತಾ, ಮಪಿಸಿ ಸೌಭಾಗ್ಯ, ಮಪಿಸಿ ದೀಪಾ, ಮಪಿಸಿ ಉಷಾ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು