12:50 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Crime News | ವೇಣೂರು: ಬೈಕ್ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

21/11/2025, 20:11

ಬೆಳ್ತಂಗಡಿ(reporterkarnataka.com): ವೇಣೂರು ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳನ್ನು ವೇಣೂರು ನಿವಾಸಿ ಮಹಮ್ಮದ್‌ ಇರ್ಷಾದ್‌ (25) ಹಾಗೂ ಪಡಂಗಡಿ ನಿವಾಸಿ ಸಾದಿಕ್‌ ಖಾನ್‌ (26) ಎಂದು ಗುರುತಿಸಲಾಗಿದೆ.
*ಘಟನೆ ವಿವರ:*
ಬೆಳ್ತಂಗಡಿಯ ಕುಕ್ಕೇಡಿ ನಿವಾಸಿ ಸಂಪತ್‌ ಕುಮಾರ್‌ ಎಂಬವರು ನವೆಂಬರ್ 10ರಂದು ರಾತ್ರಿ ವೇಣೂರು ಠಾಣಾ ವ್ಯಾಪ್ತಿಯ ಪಾನೂರು ಶ್ರೀ ಗುರುನಾರಾಯಣ ವೃತ್ತದ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮೋಟಾರು ಸೈಕಲ್‌ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಅ.ಕ್ರ 88/2025 ಕಲಂ 303‌ (2) ಬಿ.ಎನ್.‌ ಎಸ್.‌ 2023 ರಂತೆ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಅರೋಪಿಗಳಾದ ವೇಣೂರು ನಿವಾಸಿ ಮಹಮ್ಮದ್‌ ಇರ್ಷಾದ್‌ ಹಾಗೂ ಪಡಂಗಡಿ ನಿವಾಸಿ ಸಾದಿಕ್‌ ಖಾನ್‌ ಎಂಬವರುಗಳನ್ನು ದಸ್ತಗಿರಿ ಮಾಡಿದ್ದರು.
ಕಳವಾದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿತರ ಪತ್ತೆಗಾಗಿ ಬೆಳ್ತಂಗಡಿ ಡಿವೈಎಸ್ ಪಿ
ರೋಹಿಣಿ ಸಿ.ಕೆ. ಅವರ ನಿರ್ದೇಶನದಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಬಿ.ಜಿ. ಸುಬ್ಬಾಪೂರ ಮಠ ಅವರ ಮಾರ್ಗದರ್ಶನದಂತೆ, ವೇಣೂರು ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕರಾದ ಅಕ್ಷಯ್‌ ಡವಗಿ, ಓಮನ ಎನ್.‌ ಹಾಗೂ ಎ.ಎಸ್.‌ ಐ. ವೆಂಕಟೇಶ್‌ ನಾಯ್ಕ, ಹಚ್ ಸಿ. ಕೃಷ್ಣ, ಹೆಚ್ ಸಿ ಕೇಶವತಿ, ಪಿಸಿ
ಬಸವರಾಜ್‌, ಪಿಸಿ ಮೋಹನ್‌ ರವರನ್ನೊಳಗೊಂಡ ತಂಡ ಕಾರ್ಯಚರಣೆ ನಡೆಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು