6:02 AM Wednesday9 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

Crime | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ; ಒಬ್ಬನಿಗೆ ನ್ಯಾಯಾಂಗ ಬಂಧನ; ಇಬ್ಬರು ಪೊಲೀಸ್ ಕಸ್ಟಡಿಗೆ

14/05/2025, 22:03

ಮಂಗಳೂರು(reporterkarnataka.com): ನಗರದ ಹೊರವಲಯದ ಬಜಪೆ ಸಮೀಪ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳಾದ
ಕಳವಾರು ಆಶ್ರಯ ಕಾಲೋನಿ ನಿವಾಸಿಯಾದ ಅಜರುದ್ದೀನ್ ಅಲಿಯಾಸ್ ಅಜರ್ ಅಲಿಯಾಸ್ ಅಜ್ಜು(29), , ಕಾಪು ಸಮೀಪದ ಬೆಳಪು ಬದ್ರಿಯ ನಗರ ನಿವಾಸಿ
ಅಬ್ದುಲ್ ಖಾದರ್ ಅಲಿಯಾಸ್ ನೌಫಲ್(24) ಹಾಗೂ ಫರಂಗಿಪೇಟೆ
ಕುಂಪನಮಜಲು ರಸ್ತೆಯ
ಸಿಟಿ ಲೈಟ್ ಹೊಟೇಲ್ ಹಿಂಭಾಗದ ಅಪಾರ್ಟಮೆಂಟ್ ನ ನಿವಾಸಿ ನೌಷದ್ ಅಲಿಯಾಸ್ ವಾಮಂಜೂರು ನೌಷದ್ ಅವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಮೇ 1ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದಿತ್ತು. ಬಂಧಿತ ಆರೋಪಿಗಳ ಪೈಕಿ
ಅಜರುದ್ದೀನ್ ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿತ್ತು. ಈತನು ಪ್ರಕರಣದ ಆರೋಪಿಗಳಿಗೆ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿಯನ್ನು ನೀಡಿ ಕೊಲೆಗೆ ಸಹಕರಿಸಿದ್ದಾನೆ ಎಂದು ತಿಳಿದು ಬಂದಿದೆ. ಇನ್ನೊಬ್ಬ ಆರೋಪಿ ಅಬ್ದುಲ್ ಖಾದರ್ ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗುವ ಸಮಯದಲ್ಲಿ ಆರೋಪಿಗಳಿಗೆ ಸಹಕರಿಸಿದ್ದನು. ಮತ್ತೊರ್ವ ಆರೋಪಿ ನೌಷದ್ ಎಂಬಾತನು ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿರುವುದಾಗಿದೆ. ಈತನು ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳ ಪೈಕಿ ಅಜರುದ್ದೀನ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.
ಆರೋಪಿಗಳಾದ ಅಬ್ದುಲ್ ಖಾದರ್ ಮತ್ತು ನೌಷದ್ ಎಂಬವರನ್ನು ಹೆಚ್ಚಿನ ತನಿಖೆ ಕುರಿತು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು