5:19 AM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಕ್ರೂಸರ್ ಪಲ್ಟಿ: ವಿಜಯಪುರ ಜಿಲ್ಲೆಯ 5 ಮಂದಿ ಸಾವು; ರಾಮೇಶ್ವರಕ್ಕೆ ಹೋಗುತ್ತಿದ್ದಾಗ ದುರ್ಘಟನೆ

16/03/2022, 13:11

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬುಧವಾರ ಮುಂಜಾನೆ ಕ್ರೂಸರ್ ಪಲ್ಟಿಯಾದ
ಪರಿಣಾಮ 5 ಮಂದಿ ಮೃತಪಟ್ಟಿದ್ದು, ಇತರ 9 ಮಂದಿ ಗಾಯಗೊಂಡಿದ್ದಾರೆ.

ಹೊಸಪೇಟೆಯಿಂದ ಚಿತ್ರದುರ್ಗ ಮಾರ್ಗದ ರಾಷ್ಟ್ರೀಯ  ಹೆದ್ದಾರಿ 50ರಲ್ಲಿ ಬುಧವಾರ ಬೆಳಗಿನ ಜಾವ 2 ಗಂಟೆ ವೇಳೆಗೆ ಈ ದುರಂತ ನಡೆದಿದೆ. ಅಪಘಾತದಲ್ಲಿ 3 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇತರ 2 ಮಂದಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಇತರ 9 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರು ಹಾಗೂ ಗಾಯಾಳುಗಳೆಲ್ಲ ವಿಜಯಪುರ ಜಿಲ್ಲೆ ನಿಡಗುಂದಿ ಗ್ರಾಮದವರಾಗಿದ್ದು, ತಮಿಳುನಾಡಿನ ರಾಮೇಶ್ವರ ಕ್ಷೇತ್ರಕ್ಕೆ ತೆರಳಿದ್ದರೆನ್ನಲಾಗಿದೆ. ವಾಹನ  ಚಾಲಕ ವಾಹನವನ್ನು ಅತಿವೇಗವಾಗಿ ಚಲಾಯಿಸುತ್ತಿದ್ದು, ವಾಹನ ರಸ್ತೆಯ ಮಧ್ಯದ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಗೆ ಪಲ್ಟಿ ಹೊಡೆದಿದೆ ಎನ್ನಲಾಗಿದೆ.

ಮೃತರನ್ನು ನಿಡಗುಂದಿ ಸಿದ್ದಯ್ಯ ಕಾಳಗಿ(42), ಕಲ್ಲವ್ವ(60),  ಲಕ್ಷ್ಮೀಬಾಯಿ(60), ಕಿರಶಹಾಳ್ ಗ್ರಾಮದ ಕಂತವ್ವ(50), ಆಲಮಟ್ಟಿ ಗ್ರಾಮದ ನೀಲಮ್ಮ(54) ಎಂದು ಗುರುತಿಸಲಾಗಿದೆ.              

ಬಸವನಬಾಗೇವಾಡಿಯ ಬಸಮ್ಮ, ನಿಡಗುಂದಿಯ ನಿರ್ಮಲ, ಭೀಮೇಶಪ್ಪ, ಅನಸೂಯಾ, ಕಿರುಶಾಳ್ ರೇಣುಕಾ, ಸುಮಂಗಳಾ, ಸಿದ್ನಾಳ ಮಹಾನಂದೆಮ್ಮ, ತಿಪ್ಪಮ್ಮ, ಅಬ್ಯಾಳ್ ಶಂಕ್ರಮ್ಮ ತೀವ್ರ ಗಾಯಗೊಂಡವರಾಗಿದ್ದಾರೆ. ಇವರೆಲ್ಲರೂ ವಿಜಯಪುರ ಜಿಲ್ಲೆಯವರಾಗಿದ್ದಾರೆ. ಗಾಯಾಳು ನಿರ್ಮಲಾ ನೀಡಿದ ದೂರಿನಂತೆ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಘಟನಾ ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಜಿ.ಹರೀಶ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಅವರು ಗಾಯಾಳು ದಾಖಲಾಗಿರುವ ಕೂಡ್ಲಿಗಿ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿಯಾಗಿ ವಿಚಾರಿಸಿದ್ದಾರೆ. ಕೂಡ್ಲಿಗಿ ಸಿಪಿಐ ಕೊಟ್ಟೂರು ಸಿಪಿಐ ಪಿಎಸ್ಐ, ಹೊಸಹಳ್ಳಿ ಪಿಎಸ್ಐ, ಮರಿಯಮ್ಮನಹಳ್ಳಿ ಪಿಎಸ್ಐ ಸೇರಿದಂತೆ ಹಾಗೂ ಹೈವೇ ಪೆಟ್ರೋಲ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಕೊಟ್ಟೂರು ಸಿಪಿಐ ನೇತೃತ್ವದಲ್ಲಿ ಪ್ರಕರಣ ತನಿಖೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು