3:30 PM Monday21 - July 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ…

ಇತ್ತೀಚಿನ ಸುದ್ದಿ

ಸಿಆರ್ ಝಡ್ ನಿಯಮ ಸಡಿಲಿಕೆ ಪ್ರವಾಸೋದ್ಯಮ‌ಕ್ಕೆ ಪೂರಕ: ಉಡುಪಿ ಟೂರಿಸಂ ಕನೆಕ್ಟ್ – 2022 ಕಾರ್ಯಾಗಾರಕ್ಕೆ ಚಾಲನೆ

09/11/2022, 14:29

ಉಡುಪಿ(reporterkarnataka.com): ಕರಾವಳಿ ಪ್ರವಾಸೋದ್ಯಮ ಸಂಘಟನೆ, ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಹಯೋಗದಲ್ಲಿ ಆಯೋಜಿಸಿರುವ “ಉಡುಪಿ ಟೂರಿಸಂ ಕನೆಕ್ಟ್ – 2022” ಕಾರ್ಯಾಗಾರಕ್ಕೆ ಶಾಸಕ ರಘುಪತಿ ಭಟ್ ಇಂದು ಉಡುಪಿಯ ಹೋಟೆಲ್ ಕಿದಿಯೂರಿನ ಶೇಷಶಯನ ಸಭಾಂಗಣದಲ್ಲಿ ಚಾಲನೆ ನೀಡಿದರು.
ಬಳಿಕ‌ ಮಾತನಾಡಿದ ಶಾಸಕರು, ಉಡುಪಿ ಜಿಲ್ಲೆಯಲ್ಲಿಯೂ ಅತ್ಯಂತ ಸುಂದರ ಬೀಚ್ ಗಳಿವೆ. ಗೋವಾಕ್ಕಿಂತಲೂ ಸ್ವಚ್ಛ ಹಾಗೂ ಸುಂದರವಾದ ಬೀಚ್ ಗಳು ನಮ್ಮಲ್ಲಿವೆ. ಆದರೆ ಅವುಗಳು ಸೂಕ್ತ ಮೂಲಭೂತ ಸೌಕರ್ಯಗಳ ಕೊರತೆಯಿಂದ ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ವಿಫಲವಾಗುತ್ತಿವೆ. ಕೇಂದ್ರ ಸರ್ಕಾರ ಸಿಆರ್ ಝಡ್ ನಿಯಮದಲ್ಲಿ‌ ಸಡಿಲಿಕೆ ಮಾಡಿರುವುದರಿಂದ ಪ್ರವಾಸೋದ್ಯಮ‌ದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು.


ಕೇಂದ್ರ ಪ್ರವಾಸೋದ್ಯಮ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಮೊಹಮ್ಮದ್ ಫಾರೂಕ್, ರಾಜ್ಯ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಬಿ, ಕೆನರಾ ಬ್ಯಾಂಕ್ ಮಣಿಪಾಲ ಶಾಖೆಯ ಜನರಲ್ ಮ್ಯಾನೇಜರ್ ರಾಮ ನಾಯ್ಕ್, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ್ ಶೆಟ್ಟಿ, ಉಪಾಧ್ಯಕ್ಷ ನಾಗರಾಜ ಹೆಬ್ಬಾರ್, ಕಾರ್ಯದರ್ಶಿ ಗೌರವ್ ಶಣವ, ಕೋಶಾಧಿಕಾರಿ ಚಂದ್ರಕಾಂತ್ ಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು