7:19 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಸಿ.ಟಿ. ರವಿ ಬಂಧನ: ಬೆಳಗಾವಿಯಲ್ಲಿ ಬಿಜೆಪಿಯಿಂದ ಭಾರೀ ಪ್ರತಿಭಟನೆ

20/12/2024, 22:22

ಬೆಳಗಾವಿ(reporterkarnataka.com): ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ. ಟಿ.ರವಿ ಅವರ ಬಂಧನ ಖಂಡಿಸಿ ಬಿಜೆಪಿಯಿಂದ ಬೆಳಗಾವಿಯ ಚನ್ನಮ್ಮ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.


ಸುವರ್ಣಸೌಧದೊಳಕ್ಕೆ ನುಗ್ಗಿ ಕೆಲವು ಕಾಂಗ್ರೆಸ್ ಪುಡಾರಿಗಳು, ರೌಡಿಗಳು ದಾಂಧಲೆ ನಡೆಸಿದವರು ಹಾಗೂ ನಡುರಸ್ತೆಯಲ್ಲಿ ಹಲ್ಲೆ ಮಾಡಲು ಪ್ರಚೋದನೆ ನೀಡಿದವರನ್ನೂ ಸಹ ಬಂಧಿಸಬೇಕು. ಅಲ್ಲದೇ ಸಭಾಪತಿಗಳ ಗಮನಕ್ಕೂ ತರದೆ ಏಕಾಏಕಿ ಸಿ.ಟಿ. ರವಿ ಅವರನ್ನು ಬಂಧಿಸಿದ್ದು ಅಕ್ಷಮ್ಯ ಅಪರಾಧ. ಅವರು ಗಾಯವಾಗಿದ್ದರೂ ಆಸ್ಪತ್ರೆಗೆ ಕರೆದುಕೊಂಡು ಹೋಗದೇ ರಾತ್ರಿಯೆಲ್ಲಾ 400-500 ಕಿ.ಮೀ ಸುತ್ತಾಡಿಸಿ ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತೇವೆ ಎಂದು ಗದಗ, ರಾಮದುರ್ಗ ಸೇರಿ ಎಲ್ಲಾ ಪೊಲೀಸ್ ಸ್ಟೇಷನ್ ಸುತ್ತಾಡಿಸಿ ದ್ವೇಷ ಹಾಗೂ ಕೀಳುಮಟ್ಟದ ರಾಜಕೀಯ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಕೊಳ್ಳಿ ಇಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ್, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಮಾಜಿ ಶಾಸಕ ಸಂಜಯ್ ಪಾಟೀಲ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಗೀತಾ ಸುತಾರ್, ಸತೀಶ್ ಅಪ್ಪಾಜಿಗೋಳ ಸೇರಿದಂತೆ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು