6:43 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

25/12/2024, 17:06

ಬೆಳಗಾವಿ(reporterkarnataka.com): ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮನಸ್ಸಿನಲ್ಲೆ ಕೊಳೆ ಇಟ್ಟುಕೊಂಡಿದ್ದಾರೆ. ಅದನ್ನು ಎಷ್ಟು ಬಾರಿ ತೊಳೆದರೂ ಹೋಗೋದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಸಿ.ಟಿ.ರವಿ ಅವರೇ ನಿಮ್ಮ ನಾಲಿಗೆಯನ್ನು ಫಿನಾಯಿಲ್ ಹಾಕಿ ತೊಳೆಯಿರಿ. ಮೈಗೆ ಹಚ್ಚಿರೊ ಕೊಳಕನ್ನು ತೊಳೆಯಬಹುದು. ಮನಸ್ಸಿಗೆ ಹಚ್ಚಿರೋ ಕೊಳಕನ್ನು ತೊಳೆಯಲು ಸಾಧ್ಯವಿಲ್ಲ ಎಂದು ನನಗೂ ಹಿರಿಯರೊಬ್ಬರು ಹೇಳಿದ್ದಾರೆ ಎಂದು ಸಚಿವರು ತಿರುಗೇಟು ನೀಡಿದರು.
ಸಿ.ಟಿ.ರವಿ ಅವರ ಮನಸ್ಸಿನಲ್ಲೇ ಕೊಳಕಿದೆ. ಅಂತಹ ಕೊಳಕನ್ನು ತೊಳೆಯಲು ಸಾಧ್ಯವಿಲ್ಲ. ನಾನು ಎರಡು ದಿನಗಳ ಕಾಲ ಸರಿಯಾಗಿ ನಿದ್ದೆ ಮಾಡಲಿಲ್ಲ ಎಂದು ಸಚಿವರು ಹೇಳಿದರು.
ಅಂದು ಪರಿಷತ್ ಕಲಾಪದಲ್ಲಿ ಘಟನೆ ಆದ ಬಳಿಕ ನಾನು ಅಲ್ಲೆ ಕುಳಿತಿದ್ದೆ. ಅವರು ಊಸರವಳ್ಳಿ ಥರ ಓಡಿ ಹೋದರು. ತಕ್ಷಣವೇ ನಾನು ಹರಿಪ್ರಸಾದ್, ಬೋಸರಾಜು ಅವರಿಗೆ ಸಿ.ಟಿ.ರವಿ ಅವರು ಬಳಸಿದ ಭಾಷೆ ಬಗ್ಗೆ ವಿವರಿಸಿದೆ. ಡಾ. ಯತೀಂದ್ರ, ಉಮಾಶ್ರೀ, ನಾಗರಾಜ್ ಯಾದವ್, ಬಿಲ್ಕಿಸ್ ಬಾನೋ, ಎಲ್ಲರೂ ನನ್ನ ಹತ್ತಿರ ಬಂದು, ಸಿ.ಟಿ.ರವಿ ಬಳಸಿದ ಅಶ್ಲೀಲ ಪದದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಎಲ್ಲಾ ನಾಯಕರು ಜೊತೆಗೂಡಿ ಸಭಾಪತಿಗಳ ಬಳಿ ಹೋದೆವು ಎಂದು ಸಚಿವರು ವಿವರಿಸಿದರು.
ನಮ್ಮ ಮಾತನ್ನು ಆಲಿಸಿದ ಸಭಾಪತಿಗಳು ಕೂಡ ಕಣ್ಣೀರು ಹಾಕಿದರು. ಬಳಿಕ ಅಲ್ಲಿದ್ದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಫೋನ್ ಮಾಡಿ ಘಟನೆಯನ್ನು ವಿವರಿಸಿದರು. ಯಾವುದೇ ಕಾರಣಕ್ಕೂ ಧೈರ್ಯಗೇಡಬೇಡಿ, ನಾವೆಲ್ಲಾ ನಿಮ್ಮೊಂದಿಗಿದ್ದೇವೆ ಎಂದು ಆ ಸಮಯದಲ್ಲಿ ಎಲ್ಲರೂ ನನಗೆ ಧೈರ್ಯ ತುಂಬಿದರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು