5:23 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಸಿ.ಟಿ.ರವಿ ವಿರುದ್ಧ ಕಾನೂನು ಸಮರ; ಪ್ರಧಾನಿ, ರಾಷ್ಟ್ರಪತಿಗೂ ದೂರು ನೀಡುವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

23/12/2024, 23:05

* *ಸಿಎಂ‌, ಡಿಸಿಎಂ ಸೇರಿದಂತೆ ಧೈರ್ಯ ತುಂಬಿದ ಪಕ್ಷದ ಹಲವು ನಾಯಕರು*
*
* *ಸಿ.ಟಿ.ರವಿ ಹೇಳಿಕೆ ವಿಡಿಯೋ ಬಿಡುಗಡೆ ಮಾಡಿದ ಸಚಿವರು*


ಬೆಳಗಾವಿ(reporterkarnataka.com):
ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ ಎಂದರು. ‌
ಘಟನೆ ಬಳಿಕ ಸಿ.ಟಿ.ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ.
ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ. ನಾನು ಮತ್ತೆ ಸಭಾಪತಿ ಅವರಿಗೆ ದೂರು ಕೊಡುತ್ತೇನೆ.‌ ಸಿ.ಟಿ. ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆ ಬೇಗ ಆಗಬೇಕು. ಎಫ್ ಎಸ್ ಎಲ್ ವರದಿ ಬೇಗ ಬಹಿರಂಗವಾಗಬೇಕು.
ಇಂಥ ಸಂದರ್ಭದಲ್ಲೂ ಬಿಜೆಪಿಯವರು ಸಿ.ಟಿ ರವಿ ಬೆನ್ನಿಗೆ ನಿಂತಿದ್ದಾರೆ ಎಂದು ಸಚಿವರು ಕಿಡಿ ಕಾರಿದರು.
ಸಿ.ಟಿ.ರವಿ ಅವರಿಗೆ ಏನಾಗಿದೆ ಗಾಯ, ಎಷ್ಟಾಗಿದೆ ಗಾಯ. ಪೊಲೀಸರು ಎನ್ ಕೌಂಟರ್ ಮಾಡುತ್ತಿದ್ದರು, ಅಂತಾರಲ್ಲಾ, ನಾಚಿಕೆ ಆಗಲ್ವ ನಿಮಗೆ. ಇಡೀ ಕರ್ನಾಟಕದ ಜನತೆ ನಿಮಗೆ ಛೀಮಾರಿ ಹಾಕುತ್ತಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಏನು ಮಾಡಬೇಕು ಅದನ್ನು ಮಾಡಿದ್ದಾರೆ. ಪ್ರಕರಣದ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸಿ.ಟಿ.ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ, ಸಾಧ್ಯವಾದರೆ ಭೇಟಿಯಾಗುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
*ಸಿ.ಟಿ ರವಿ ಆಡಿದ ಮಾತಿರುವ ವಿಡಿಯೋ ರಿಲೀಸ್ ಮಾಡಿದ ಸಚಿವೆ:*
ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಬಳಸಿದ ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು ಬಿಡುಗಡೆ ಮಾಡಿದರು. ಎರಡು ಪ್ರತ್ಯೇಕ ‌ವಿಡಿಯೋಗಳನ್ನು ಸಚಿವರು ರಿಲೀಸ್ ಮಾಡಿದರು. ಒಂದು ವಿಡಿಯೋದಲ್ಲಿ ಸಿ.ಟಿ. ರವಿ ಸಚಿವರಿಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು. ‌
* *ಸಿಎಂ, ಡಿಸಿಎಂ ಸೇರಿದಂತೆ ಪಕ್ಷದ ನಾಯಕರಿಂದ ಧೈರ್ಯ:*
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಲವು ನಾಯಕರು ನನಗೆ ಧೈರ್ಯ ತುಂಬಿದರು ಎಂದರು.
ಸಿ.ಟಿ.ರವಿ ಬೆಳಗಾವಿ ಚಲೋ ಮಾಡುವ ಬಗ್ಗೆ ಕೇಳಿದಾಗ,
‌ಬೆಳಗಾವಿ ಶಾಂತಿಯ ತೋಟ. ನಾಲಿಗೆಯನ್ನು ಸ್ವಚ್ಛವಾಗಿಟ್ಟುಕೊಂಡು ಇಲ್ಲಿಗೆ ಯಾರು ಬೇಕಾದರೂ ಬರಬಹುದು. ಅಂತಹ ವ್ಯಕ್ತಿಗಳಿಗೆ ತುಂಬು ಹೃದಯದ ಸ್ವಾಗತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು