12:38 AM Tuesday25 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ಸಿ.ಟಿ. ರವಿ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ; ಹೇಳಿಕೆ ನೀಡುವುದು ಸರಿಯಲ್ಲ: ಗೃಹ ಸಚಿವ ಡಾ. ಪರಮೇಶ್ವರ್

24/12/2024, 16:11

ಹುಬ್ಬಳ್ಳಿ(reporterkarnataka.com): ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದ್ದು, ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್​ ಹೇಳಿದರು.
ಸಿ ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆಗೆ ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮ ಜತೆ ಮಾತನಾಡಿದ ಅವರು, ಸ್ಪೀಕರ್ ಅವರು ತಮ್ಮ ಕೆಲಸ ತಾವು ಮಾಡುತ್ತಿದ್ದಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ ಬಾಧಕಗಳನ್ನು ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ, ತನಿಖೆಯನ್ನು ಸರಿಯಾಗಿ ಮಾಡಬೇಕಾಗುತ್ತೆ. ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ ಎಂದರು.
ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದ್ರೂ ಅದನ್ನು ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡುತ್ತಾರೆ ಅಂತಾ ನಾವು ಇಲಾಖೆ ನಡೆಸೋಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಗೃಹ ಸಚಿವರು ನುಡಿದರು.
ಪರಮೇಶ್ವರ್​ ಅಸಮರ್ಥ ಗೃಹ ಸಚಿವ ಎಂಬ ಜೋಶಿಯವರ ಲೇವಡಿ ವಿಚಾರವಾಗಿ ತಿರುಗೇಟು ನೀಡಿ, ಪ್ರಹ್ಲಾದ್ ಜೋಶಿಯವರು ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ಳುತ್ತಾರಾ? ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಹಾಗಾಗಿ ಅವರು ಹಾಗೆ ಹೇಳಿದ್ದಾರೆಂದರು‌.
ಹಳೇ ಹುಬ್ಬಳ್ಳಿ ಪೊಲೀಸ್ ಇನ್ಸ್​ಪೆಕ್ಟರ್​ ಸುರೇಶ ಯಳ್ಳೂರ ಮೇಲೆ ಲೈಂಗಿಕ ಕಿರುಕುಳ ಆರೋಪ ವಿಚಾರವಾಗಿ, ಈ ಬಗ್ಗೆ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಮಾಹಿತಿ ಪಡೆದು ಪೊಲೀಸ್ ಇನ್ಸ್​ಪೆಕ್ಟರ್ ತಪ್ಪು ಎಸಗಿದ್ದರೆ, ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಬಗ್ಗೆ ರಿವ್ಯೂವ್ ಮಾಡುತ್ತೇನೆ. ಅದರಲ್ಲಿ ತಪ್ಪುಗಳು ಕಂಡುಬಂದಲ್ಲಿ ಸರಿ ಮಾಡುವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು