3:18 AM Saturday4 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

19/12/2024, 23:58

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

ಮಂಗಳೂರು(reporterkarnataka.com):
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ‌‌.ಟಿ.ರವಿ ಯವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಸಹೋದರ ಚೆನ್ನರಾಜ ಮತ್ತು ಆಪ್ತ ಸಹಾಯಕ ಸದ್ದಾಂ ಮತ್ತು ಸಂಗಡಿಗರು ಹಲ್ಲೆ ಮಾಡುವುದರ ಮೂಲಕ ತಮ್ಮ ಗೂಂಡಾ ಪ್ರವೃತ್ತಿಯನ್ನು ರಾಜ್ಯದ ಶಕ್ತಿ ಕೇಂದ್ರವಾದ ಸುವರ್ಣ ಸೌಧದ ಒಳಗೂ ಆರಂಭಿಸಿ ಅತೀ ಕೆಟ್ಟ ಘಟನೆಗೆ ಕಾರಣರಾಗಿದ್ದಾರೆ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಭೃಷ್ಟಾಚಾರ ಮಾಡಿದರೂ ಮೊಂಡುತನ ತೋರುವ ಸಿದ್ದರಾಮಯ್ಯನ ನಡವಳಿಕೆ ಕಾಂಗ್ರೇಸಿಗರ ಭಂಡತನಕ್ಕೆ ದಾರಿ ಮಾಡಿದಂತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನ ಪರಿಷತ್ ನ ಸದಸ್ಯರಾದ ಕಿಶೋರ್ ಕುಮಾರ್ ರವರ ಮೇಲೂ ಹಲ್ಲೆ ನಡೆಸಿರುವುದನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಖಂಡಿಸಿದ್ದಾರೆ.
ಸುವರ್ಣ ಸೌಧದಲ್ಲಿ ಆಗಿರುವ ಭದ್ರತಾ ವೈಫಲ್ಯಕ್ಕೆ ಮತ್ತು ಆಗಿರುವ ಘಟನೆಗೆ ಮುಖ್ಯಮಂತ್ರಿಗಳು ಕ್ಷಮೆಯಾಚಿಸಬೇಕು ಮತ್ತು ಹಲ್ಲೆಕೋರರಿಗೆ ಶಿಕ್ಷೆಯಾಗ ಬೇಕೆಂದು ಅವರು ಆಗ್ರಹಿಸಿದ್ದಾರೆ.
ಜನಪ್ರತಿನಿಧಿಗಳಿಗೆ ರಾಜ್ಯದ ಶಕ್ತಿಕೇಂದ್ರದಲ್ಲೇ ರಕ್ಷಣೆ ಇಲ್ಲದಿರುವುದು ಅತ್ಯಂತ ಕಳವಳಕಾರಿ ಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಕೇವಲ ಈ ರೀತಿಯ ಘಟನೆಗಳಿಂದ ರಾಜ್ಯ ಸುದ್ದಿಯಾಗುತ್ತಿರುವುದು ಬಹಳ ಖೇದಕರ. ಉತ್ತರ ಕರ್ಣಾಟಕದ ಜನತೆಯ ಬೇಡಿಕೆ ಮತ್ತು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಯಾಗಬೇಕಿದ್ದ ಸುವರ್ಣ ಸೌಧ ಗೂಂಡತನಕ್ಕೆ ಸಾಕ್ಷಿಯಾಗಿರುವುದು ನಾಚಿಕೆಗೇಡು. ಜತೆಯಲ್ಲಿ ಸಾರ್ವಜನಿಕರಿಗೆ ಕಾಂಗ್ರೆಸಿಗರಿಂದ ಆಗುತ್ತಿರುವ ಅನ್ಯಾಯದ ಪಾಡು ಕೇಳಂದತಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು