2:58 AM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಸೈಬರ್ ಕ್ರೈಂ ತಡೆಗೆ ಪೊಲೀಸ್ ಇಲಾಖೆಯಲ್ಲಿರುವ ಸಿಬ್ಬಂದಿಗಳಿಗೆ ತರಬೇತಿ: ಗೃಹ ಸಚಿವ ಡಾ. ಪರಮೇಶ್ವರ್

29/10/2023, 19:47

ಮಂಗಳೂರು(reporterkarnataka.com): ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಇರುವವರಿಗೆಲ್ಲ ಸೈಬರ್ ಕ್ರೈಂ ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಅವರು ಭಾನುವಾರ ನಗರದ ಶಸ್ತ್ರಸ್ತ್ರ ಪೊಲೀಸ್ ಠಾಣೆಯನ್ನು ಉದ್ಘಾಟಿಸಿದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಕಳೆದ 6 ತಿಂಗಳಿಂದ ಅಪರಾಧ ಪ್ರಕರಣಗಳು ಇಳಿಮುಖವಾಗಿದ್ದು, ಸೈಬರ್ ಕ್ರೈ ಪ್ರಕರಣಗಳು ಮಾತ್ರ ಹೆಚ್ಚುತ್ತಲೇ ಇವೆ. ಆದುದರಿಂದ ಪೊಲೀಸ್ ಇಲಾಖೆಯಲ್ಲಿ ಇರುವವರಿಗೆಲ್ಲ ಸೈಬರ್ ಕ್ರೈಂ ತರಬೇತಿ ನೀಡಲಾಗುವುದು ಎಂದರು.

ಮೊದಲು ಪೊಲೀಸ್ ಇಲಾಖೆಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಆದವರು ಬರುತ್ತಿದ್ದರು. ಆದರೆ ಈಗ ಸ್ನಾತಕೋತ್ತರ ಪದವಿ, ಡಬಲ್ ಪದವಿ, ಇಂಜಿನಿಯರಿಂಗ್ ಅದವರೆಲ್ಲ ಬರುತ್ತಿದ್ದಾರೆ. ಅವರಿಗೆ ಕಂಪ್ಯೂಟರ್ ತರಬೇತಿ, ಸೈಬರ್ ಕ್ರೈಂ ಬಗ್ಗೆ ತರಬೇತಿ ನೀಡುವುದು ಸುಲಭ ಎಂದು ಗೃಹ ಸಚಿವರು ಅಭಿಪ್ರಾಯಪಟ್ಟರು.
ಪೊಲೀಸ್ ಇಲಾಖೆಯನ್ನು ಹಾಗೂ ಸಿಬ್ಬಂದಿಗಳನ್ನು ಆಧುನಿಕರಿಸುವ ನಿಟ್ಟಿನಲ್ಲಿ ತರಬೇತಿ ನೀಡಲಾಗುವುದು. ಈಗಾಗಲೇ ರಾಜ್ಯದ ಬಹುತೇಕ ಪೊಲೀಸ್ ಠಾಣೆಗಳು ಹಳೆಯದಾಗಿದ್ದು, ಅದನ್ನು ಆಧುನಿಕರಿಸುವ ನಿಟ್ಟಿನಲ್ಲಿ ಪೊಲೀಸ್ ಠಾಣೆ ಯೋಜನೆಯಡಿ ನೂತನ 100 ಪೊಲೀಸ್ ಠಾಣೆಗಳನ್ನು ತೆರೆಯಲಾಗುವುದು. ಮುಂದಿನ ದಿನಗಳಲ್ಲಿ ಬಾಕಿ ಇರುವ ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದರು.
ಈಗಾಗಲೇ ‘ಪೊಲೀಸ್ ಗೃಹ’ ಯೋಜನೆಯಡಿ ಶೇ.40ರಷ್ಟು ಎರಡು ಬೆಡ್ ರೂಂಗಳ ಫ್ಲಾಟ್‌ಗಳನ್ನು ನಿರ್ಮಾಣ ಮಾಡಲಾಗಿದ್ದು, ಮುಂದಿನ ನಾಲ್ಕು ವರ್ಷದಲ್ಲಿ ಶೇ.70 ರಷ್ಟು ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು