8:44 PM Saturday14 - February 2026
ಬ್ರೇಕಿಂಗ್ ನ್ಯೂಸ್
ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ…

ಇತ್ತೀಚಿನ ಸುದ್ದಿ

ದ.ಕ.: ಬೈಕ್‌ನಲ್ಲಿ ಡಬಲ್ ರೈಡಿಗೆ ನಾಳೆ ಯಿಂದ ಅವಕಾಶವಿಲ್ಲ: ಎಡಿಜಿಪಿ ಅಲೋಕ್ ಕುಮಾರ್ ಆದೇಶ

04/08/2022, 14:51

ಮಂಗಳೂರು(reporterkarnataka.com):  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ನಿರಾಕರಿಸಲಾಗಿದೆ.

ಎಡಿಜಿಪಿ ಅಲೋಕ್ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಹೊಸ ನಿಯಮ ಜಾರಿಯಾಗಲಿದ್ದು ಕೆಲವು ಬಾರಿ ಹಿಂಬದಿ ಸವಾರರಿಂದ ತೊಂದರೆ ಉಂಟಾಗುವ ಸಾಧ್ಯತೆ ಇರುವ ಕಾರಣಕ್ಕೆ ನಾಳೆ ಯಿಂದ ಸಂಜೆ 6 ರಿಂದ 1 ವಾರ ನಿಯಮ ಅನುಷ್ಠಾನವಾಗಲಿದೆ ಎಂದು ಅಲೋಕ್ ಕುಮಾರ್ ಸೂಚನೆ ಹೊರಡಿಸಿದ್ದಾರೆ.

18 ವರ್ಷದೊಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ರಿಯಾಯಿತಿ ಇರಲಿದ್ದು ಕೇವಲ ಪುರುಷ ಹಿಂಬದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.

ಬೇರೆ ರಾಜ್ಯದಲ್ಲೂ ಈ ನಿಯಮ ಜಾರಿಯಲ್ಲಿತ್ತು. ಆಗ ಎಲ್ಲಾ ಪುರುಷ ಹಿಂಬದಿ ಸವಾರರಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸಲು ಅವಕಾಶ ನಿರಾಕರಿಸಲಾಗಿತ್ತು ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು