7:30 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡದಲ್ಲಿ ನಿಸ್ಸಂಶಯವಾಗಿ ಕಾಂಗ್ರೆಸ್ ಜಯಭೇರಿ: ಕೊಕ್ಕಡ ಪ್ರಚಾರ ಸಭೆಯಲ್ಲಿ ಪದ್ಮರಾಜ್ ಆರ್. ಪೂಜಾರಿ ವಿಶ್ವಾಸ

18/04/2024, 21:15

ಕೊಕ್ಕಡ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಕೊಕ್ಕಡದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಯಭೇರಿ ಬಾರಿಸಲಿದೆ‌. ಇದರಲ್ಲಿ ಯಾವುದೇ ಸಂಶಯ ಬೇಡ. ಇದುವರೆಗೆ ಆರ್ಥಿಕವಾಗಿ ಹಿಂದುಳಿದವರ ಏಳಿಗೆಗಾಗಿ ಶ್ರಮಿಸಿದ್ದೇನೆ. ಇನ್ನು ಮುಂದೆಯೂ ಬಡವರ ಏಳಿಗೆಗಾಗಿ ದುಡಿಯುತ್ತೇನೆ. ಕಾಂಗ್ರೆಸ್ ಸರಕಾರ ನೀಡಿರುವ ಗ್ಯಾರೆಂಟಿ ಯೋಜನೆಗಳಿಂದ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗಿದೆ ಎಂದ ಅವರು, ವಸಂತ್ ಬಂಗೇರರ ಚಿಂತನೆ, ಆದರ್ಶಗಳನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ ಎಂದರು.
ಮಾಜಿ ಸಚಿವ ಗಂಗಾಧರ ಗೌಡ ಮಾತನಾಡಿ, ನಿಷ್ಕಲಂಕ ವ್ಯಕ್ತಿತ್ವದ ಪದ್ಮರಾಜ್ ಆರ್. ಪೂಜಾರಿ ಅವರು ಈ ಮಣ್ಣಿನಲ್ಲೇ ಹುಟ್ಟಿ, ಬೆಳೆದವರು. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೇ, ಅವರ ಗೆಲುವಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಸಿಪಿಎಂ ಪಕ್ಷದ ನೇತಾರ ಬಿ.ಎಂ. ಭಟ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್, ಡಿಸಿಸಿ ಪ್ರ. ಕಾರ್ಯದರ್ಶಿ ರಂಜನ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ನಾಗೇಶ್ ಗೌಡ, ಜಿಪಂ ಮಾಜಿ ಸದಸ್ಯೆ ನಮಿತಾ ಕೆ. ಪೂಜಾರಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ್ ಗಬ್ಬಲಡ್ಕ, ಪ್ರಚಾರ ಸಮಿತಿ ಅಧ್ಯಕ್ಷ ಧರ್ಣೇಂದ್ರ ಕುಮಾರ್, ವಂದನಾ ಭಂಡಾರಿ, ಶೇಖರ್ ಬೆಳಾಲ್, ಗಣೇಶ್ ಗಬ್ಬಲಡ್ಕ, ಬಾಲಕೃಷ್ಣ ಗೌಡ ಕೇರಿಮಾರು, ಸುಂದರ ಗೌಡ, ರಾಜಶೇಖರ್ ಅಜ್ರಿ, ಹಕೀಂ, ದಯಾನಂದ ಪೂಜಾರಿ, ಕಲಂದರ್ ಕೊಕ್ಕಡ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು