3:52 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ದ.ಕ. ಸೈಬರ್ ಪೊಲೀಸರ ಕಾರ್ಯಾಚರಣೆ: ಪೂಜೆ ಮಾಡಿ ಪರಿಹಾರ ನೀಡುವುದಾಗಿ ಹೇಳಿ 24 ಸಾವಿರ ರೂ. ವಂಚಿಸಿದ ಬೆಂಗಳೂರಿನ ನಿವಾಸಿಯ ಬಂಧನ

05/11/2025, 20:43

ಮಂಗಳೂರು(reporterkarnataka.com): ಸಾರ್ವಜನಿಕರ ಸಮಸ್ಯೆಗಳನ್ನು ಪೂಜೆ ಮಾಡಿ ಪರಿಹಾರ ನೀಡುವುದಾಗಿ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಪ್ರಚಾರ ನೀಡಿ ವ್ಯಕ್ತಿಯೊಬ್ಬರಿಗೆ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಬೆಂಗಳೂರು ನಿವಾಸಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸುಂಕದಕಟ್ಟೆಯ ಶ್ರೀನಿವಾಸ ನಗರ ನಿವಾಸಿಯಾದ ವಾಸುದೇವ ಆರ್‌. ಎಂಬಾತ ತನ್ನ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ತತ್‌ಕ್ಷಣದಲ್ಲಿ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274/- ರೂ. ವಂಚಿಸಿದ್ದ.
ಈ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಅ.ಕ್ರ. 87-2025, U/S 66(D) IT Act and 318(4) BNS ರಂತೆ ಪ್ರಕರಣ ದಾಖಲಾಗಿತ್ತು. ಇದೀಗ ಬೆಂಗಳೂರಿನ ಯಶವಂತಪುರ
ಗೋಕುಲ 1st ಹಂತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರೋಪಿ ವಾಸುದೇವ ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿ, ಆತನಿಂದ ಕೃತ್ಯಕ್ಕೆ ಬಳಸಿದ 4 ಮೊಬೈಲ್‌ ಫೋನ್‌ಗಳು ಹಾಗೂ 20,300/- ರೂ. ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಸೊತ್ತಿನ ಒಟ್ಟು ಮೌಲ್ಯ ರೂ 1,60,300/- ಆಗಿರುತ್ತದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು