12:45 PM Friday18 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: ಮಳೆ ಹಾನಿ, ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ; ಕಾಳಜಿ ಕೇಂದ್ರ ತೆರೆಯಲು ಸೂಚನೆ

19/07/2024, 22:11

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಶುಕ್ರವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್, ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರೊಂದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದರು.
ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಬಜಪೆ ಅದ್ಯಪಾಡಿ, ಬಂಟ್ವಾಳ, ಆಲಡ್ಕ, ಉಪ್ಪಿನಂಗಡಿ ಮತ್ತಿತರ ಕಡೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು. ಅದ್ಯಪಾಡಿಯಲ್ಲಿ ದೋಣಿಯಲ್ಲಿ ಸಂಚರಿಸಿ, ನೆರೆ ಪರಿಸ್ಥಿತಿ ವೀಕ್ಷಿಸಿದರು.
ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ತಹಶೀಲ್ದಾರ್ ಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು