10:00 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ದ. ಕ. ಜಿಲ್ಲೆಯಲ್ಲಿ ದಿನಕ್ಕೆ ಸುಮಾರು 1 ಲಕ್ಷ ಲೀಟರ್‌ನಷ್ಟು ಹಾಲಿನ ಕೊರತೆ: ಹೈನುರಾಸುಗಳಲ್ಲಿ ಪೋಷಕಾಂಶಗಳ ನಿರ್ವಹಣೆ ಕಾರ್ಯಾಗಾರದಲ್ಲಿ ಬಹಿರಂಗ

17/11/2023, 23:33

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಕ್ಕೆ ಸುಮಾರು ಒಂದು ಲಕ್ಷ ಲೀಟರ್‌ನಷ್ಟು ಹಾಲಿನ ಉತ್ಪಾದನಾ ಕೊರತೆಯಿದ್ದು, ಈ ಕೊರತೆಯನ್ನು ಸರಿದೂಗಿಸಲು ಹೈನುರಾಸುಗಳಿಗೆ ಕೊಡುವ ಆಹಾರ ಮತ್ತು ಪೋಷಕಾಂಶಗಳ ಸಮತೋಲನ ಬಳಕೆಯ ಬಗ್ಗೆ ರೈತರು ಹೆಚ್ಚು ಗಮನ ಹರಿಸಬೇಕೆಂದು ಪಶು ಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹೇಳಿದರು.


ಪಶುವೈದ್ಯರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಹೈನುರಾಸುಗಳಲ್ಲಿ ಪೋಷಕಾಂಶಗಳ ನಿರ್ವಹಣೆ’ ಕುರಿತ ವಿಷಯದಲ್ಲಿ ಒಂದು ದಿನದ ತಾಂತ್ರಿಕ
ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿಜ್ಞಾನಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಟಿ.ಜೆ. ರಮೇಶ ಮಾತನಾಡಿ, ರೈತರು ಮೇವಿನ ಪರ್ಯಾಯ ಮೂಲಗಳ ಬಗ್ಗೆ ಹೆಚ್ಚು ಗಮನ ಹರಿಸಲು ಸೂಚಿಸಿದರು.
ಸಮಾರಂಭದ ಉದ್ಘಾಟನೆಯನ್ನು ಕ.ಪ.ಪ.ಮೀ.ವಿ.ವಿ. ವಿಸ್ತರಣಾ ನಿರ್ದೇಶಕ ಡಾ.ಎಸ್.ಆರ್. ಸೋಮಶೇಖರ್ ನೆರವೇರಿಸಿದರು
ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಎನ್‌.ಕೆ.ಎಸ್‌.ಗೌಡ, (ಮುಖ್ಯಸ್ಥರು, ಪ್ರಾಣಿ ಆಹಾರ ವಿಭಾಗ), ಡಾ. ಗಿರಿಧರ್, (ಮುಖ್ಯ ವಿಜ್ಞಾನಿಗಳು, ರಾಷ್ಟ್ರೀಯ ಪಶು ಮೋಷಣೆ ಮತ್ತು ಶರೀರಕ್ರಿಯಾ ವಿಜ್ಞಾನ ಸಂಸ್ಥೆ,ಐ.ಸಿ.ಎ.ಆರ್‍, ಆಡುಗೋಡಿ ಬೆಂಗಳೂರು) ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಐ.ಸಿ.ಎ.ಆರ್.-ಗೇರು, ನಿರ್ದೇಶನಾಲಯ, ಪುತ್ತೂರು ಇವರ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಪರಿಶಿಷ್ಟ ಜಾತಿ ರೈತರಿಗೆ ಹಸುಗಳಿಗೆ ಕೊಟ್ಟಿಗೆಯಲ್ಲಿ ಬಳಸುವ ರಬ್ಬರ್‌ಮ್ಯಾಟ್‌ಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಡಾ. ಶಿವಕುಮಾರ್, ಆರ್, (ಸಹಾಯಕ
ಪ್ರಾಧ್ಯಾಪಕರು (ಪ್ರಾಣಿ ಶಾಸ್ತ್ರ) ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು), ಇವರು ಸಂಯೋಜನೆ ಮಾಡಿದ್ದು, ಡಾ.ಮೋಹನ್‌, ಜಿ.ಎಸ್‌.(ಮುಖ್ಯ ವಿಜ್ಞಾನಿಗಳು, ಹಾಗೂ ಡಾ. ಮಂಜೇಶ, ವಿಜ್ಞಾನಿಗಳು, ಗೇರು ನಿರ್ದೇಶನಾಲಯ, ಪುತ್ತೂರು) ಹಾಗೂ ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು