ಇತ್ತೀಚಿನ ಸುದ್ದಿ
ದ.ಕ. ಜಿಲ್ಲಾಡಳಿತ ವಿರುದ್ಧ ಬಿಜೆಪಿ ಶಾಸಕರ ಪ್ರತಿಭಟನೆ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಧರಣಿ
14/08/2023, 22:34
ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಶಾಸಕರ ಹಕ್ಕುಚ್ಯುತಿ ಆರೋಪಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾಡಳಿತದ ವಿರುದ್ದ ಬಿಜೆಪಿ ಶಾಸಕರು ಧರಣಿ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ದಕ್ಷಿಣ ಕನ್ನಡದ ಬಿಜೆಪಿ ಶಾಸಕರು ಧರಣಿ ಕೂತು ತಮ್ಮ ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಸರಕಾರ ಪ್ರತಿಯೊಂದು ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತ ಪಡಿಸಲಾಯಿತು.
ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಅವರುಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ
ಶಾಸಕರಾದ ಡಾ.ಭರತ್ ಶೆಟ್ಟಿ ವೈ, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ಭಾಗಿರಥಿ ಮುರುಳ್ಯ, ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭಾಗಿಯಾಗಿದರು.
ಸ್ಥಳಕ್ಕೆ ಆಗಮಿಸಿದ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜೊತೆಗೆ ಬಿಜೆಪಿ ಶಾಸಕರ ವಾಗ್ವಾದವಾಗಿದ್ದು, ಪ್ರೋಟೋಕಾಲ್ ಪ್ರಕಾರ ಕಾರ್ಯಕ್ರಮ ನಡೆದರೂ ಹಸ್ತಕ್ಷೇಪ ನಡೆಸಿದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಮುಗಿಲನ್ ತಾನು ಏನೂ ಹಸ್ತಕ್ಷೇಪ ಮಾಡಿಲ್ಲ ಎಂದು ಸಮಜಾಯಿಷಿ ನೀಡಿ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಲಾಗುದು ಎಂದರಲ್ಲದೆ ಅಧಿಕಾರಿಗಳ ಅಮಾನತು ಆದೇಶ ವಾಪಾಸ್ ಪಡೆಯುವ ಭರವಸೆ ನೀಡಿದ ಮೇರೆಗೆ ಧರಣಿ ನಿಲ್ಲಿಸಲಾಯಿತು.