12:03 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿಯಾಗಿ ಮಂಜುನಾಥ್ ಎಚ್.ಎಸ್. ನೇಮಕ

28/03/2023, 10:27

ಮಂಗಳೂರು(reporterkarnataka.com): ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ 2023ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ಸುಗಮವಾಗಿ, ಮುಕ್ತವಾಗಿ ಹಾಗೂ ಶಾಂತಿಯುತವಾಗಿ, ಯಾವುದೇ ರೀತಿಯ ಚುನಾವಣಾ ಅಕ್ರಮಗಳು ನಡೆಯದಂತೆ ನಿಗಾವಹಿಸುವ ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿಯನ್ನಾಗಿ, ಆದಾಯ ತೆರಿಗೆ ಇಲಾಖೆಯ ಉಪನಿರ್ದೇಶಕರಾಗಿರುವ ಮಂಜುನಾಥ್ ಎಚ್.ಎಸ್. (ಐ.ಆರ್.ಎಸ್) ಅವರನ್ನು ನೇಮಕ ಮಾಡಲಾಗಿದೆ.

ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಅಕ್ರಮ ಹಣ ಸಾಗಾಟ, ಅಕ್ರಮ ವಸ್ತುಗಳ ಸಾಗಾಟ ಮತ್ತು ದಾಸ್ತಾನುಗಳು ಹಾಗೂ ಚುನಾವಣಾ ಪ್ರಚೋದನೆಗೆ ಸಂಬಂಧಿಸಿದಂತೆ ಇನ್ನಿತರ ಅಕ್ರಮಗಳು ಕಂಡು ಬಂದಲ್ಲಿ ಸಾರ್ವಜನಿಕರು ಮಂಜುನಾಥ್ ಅವರ ಮೊ: 9353341788 ಸಂಪರ್ಕಿಸಬಹುದು, ಲಿಖಿತವಾಗಿ ದೂರುಗಳಿದ್ದರೆ, ಮಂಜುನಾಥ್ ಎಚ್.ಎಸ್., ಆದಾಯ ತೆರಿಗೆ ಇಲಾಖೆ ಉಪ ನಿರ್ದೇಶಕ, ಆಲ್‍ಬಕ್ಯೂರ್ ಹೌಸ್, ಫೋರಂ ಫಿಜ್ಜಾ ಮಾಲ್ ಎದುರು, ಪಾಂಡೇಶ್ವರ, ಮಂಗಳೂರು ಹಾಗೂ ಇ-ಮೇಲ್: ಕಳುಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು