2:54 AM Sunday26 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: ಒಂದು ಸ್ಥಾನ ಕಳೆದುಕೊಂಡ ಬಿಜೆಪಿ, ಒಂದು ಸ್ಥಾನ ಗಳಿಸಿದ ಕಾಂಗ್ರೆಸ್

13/05/2023, 19:02

ಮಂಗಳೂರು(reporterkarnataka.com): ರಾಜ್ಯ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಜಿಲ್ಲೆಯಲ್ಲಿ ಬಿಜೆಪಿ
ಕಳೆದ ಚುನಾವಣೆಗೆ ಹೋಲಿಸಿದರೆ, ಒಂದು ಸ್ಥಾನ ಕಳೆದು ಕೊಂಡಿದೆ. ಹಾಗೆ ಕಾಂಗ್ರೆಸ್ ಒಂದು ಸ್ಥಾನ ಗಳಿಕೆ ಮಾಡಿದೆ.
ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಬಂಟ್ವಾಳ, ಬೆಳ್ತಂಗಡಿ ಹಾಗೂ ಸುಳ್ಯದಲ್ಲಿ ಬಿಜೆಪಿ ಮತ್ತೆ ಭರ್ಜರಿ ಗೆಲುವು ಸಾಧಿಸಿ. ಅದರೆ ಪುತ್ತೂರು ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡಿದೆ. ಸ್ಥಳೀಯ ಬಿಜೆಪಿಯೊಳಗಿನ ಆಂತರಿಕ ವೈರುಧ್ಯ ಬಿಜೆಪಿಯನ್ನು ಇಲ್ಲಿ ನೆಲಕಚ್ಚುವಂತೆ ಮಾಡಿದೆ. ಚುನಾವಣಾ ಸಮಯದಲ್ಲಿ ಬಿಜೆಪಿ ಪಾಳಯದಿಂದ ಕಾಂಗ್ರೆಸ್ ಗೆ ಜಿಗಿದ ಅಶೋಕ್ ಕುಮಾರ್ ರೈ ಅವರು ತಮ್ಮ ಮೊದಲ ಪ್ರಯತ್ನದಲ್ಲೇ ವಿಧಾನಸಭೆ ಮೆಟ್ಟಿಲು ಏರುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆ ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಬಾಗೀರಥಿ ಮುರಳ್ಯ ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ. ಉಳಿದಂತೆ ಮಂಗಳೂರು ಉತ್ತರದಿಂದ ಡಾ. ಭರತ್ ಶೆಟ್ಟಿ, ಮಂಗಳೂರು ದಕ್ಷಿಣದಿಂದ ಡಿ. ವೇದವ್ಯಾಸ ಕಾಮತ್, ಬಂಟ್ವಾಳದಿಂದ ರಾಜೇಶ್ ನಾಯ್ಕ್, ಬೆಳ್ತಂಗಡಿಯಿಂದ ಹರೀಶ್ ಪೂಂಜ ಹಾಗೂ ಮೂಡಬಿದ್ರೆಯಿಂದ ಉಮಾನಾಥ ಕೋಟ್ಯಾನ್ ಅವರು ಎರಡನೇ ಬಾರಿಗೆ ಪುನರಾಯ್ಕೆಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು