ಇತ್ತೀಚಿನ ಸುದ್ದಿ
ದ.ಕ. ಜಿಲ್ಲೆ; ಶಾಂತಿಯುತ ಮತದಾನಕ್ಕೆ ಇಂದು ಜಾತ್ರೆ, ಸಂತೆ ನಿಷೇಧ: ಜಿಲ್ಲಾಧಿಕಾರಿ ಆದೇಶ
10/05/2023, 06:21

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಯಾವುದೇ ರೀತಿಯ ಹಿತಕರ ಘಟನೆಗಳು ನಡೆಯದಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಮತದಾನದ ಪವಿತ್ರತೆ ಕಾಪಾಡುವ ಹಿತದೃಷ್ಟಿಯಿಂದ ಮೇ 10ರಂದು ಜಿಲ್ಲೆಯಾದ್ಯಂತ ನಡೆಯುವ ವಾರದ ಸಂತೆ, ಜಾತ್ರೆ, ಉತ್ಸವ, ಮೇಳ, ಇತ್ಯಾದಿಗಳನ್ನು ನಿಷೇಧಿಸಿ ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅವರು ಆದೇಶ ಹೊರಡಿಸಿದ್ದಾರೆ.