ಇತ್ತೀಚಿನ ಸುದ್ದಿ
ದ.ಕ.ಜಿಲ್ಲೆಯಲ್ಲಿ ಮುಂದಿನ 24 ಗಂಟೆ ಬಾರಿ ಮಳೆ ಆಗುವ ಸಾಧ್ಯತೆ : ಶಾಲಾ- ಕಾಲೇಜಿಗೆ ನಾಳೆಯೂ(ಜು.7) ರಜೆ ಘೋಷಿಸಿದ ಜಿಲ್ಲಾಧಿಕಾರಿ
06/07/2022, 19:56
ಮಂಗಳೂರು(reporterkarnataka.com: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.7) ರಜೆ ಘೋಷಣೆ ಮಾಡಲಾಗಿದೆ.
ಅವ್ಯಾಹತ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ ಸಾರಲಾಗಿತ್ತು. ಇದೀಗ ನಾಳೆಯೂ ರಜೆ ಘೋಷಿಸಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.