2:13 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ದ.ಕ.ಜಿಲ್ಲೆಯಲ್ಲಿ ಡ್ರಗ್ಸ್ ನಿರ್ಮೂಲನೆ: ಪೊಲೀಸ್ ಇಲಾಖೆಗೆ ಸ್ಪೀಕರ್ ಖಾದರ್ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಖಡಕ್ ವಾರ್ನಿಂಗ್

24/06/2023, 20:13

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಇಡೀ ದೇಶವನ್ನೇ ಕಾಡುತ್ತಿರುವ ಡ್ರಗ್ಸ್ ಜಾಲವನ್ನು ದ.ಕ.ಜಿಲ್ಲೆಯಲ್ಲಿ ಸಂಪೂರ್ಣ ನಿರ್ಮೂಲನೆ ಮಾಡಲು ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪಣ ತೊಟ್ಟಿದ್ದಾರೆ.
ರಾಜ್ಯದಲ್ಲಿ ಹೊಸ ಸರಕಾರ ಆಡಳಿತಕ್ಕೆ ಬಂದ ಬಳಿಕ ದಿನೇಶ್ ಗುಂಡೂರಾವ್ ಅವರನ್ನು ದ.ಕ. ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನಿಯೋಜಿಸಲಾಗಿದೆ. ಜಿಲ್ಲೆಯವರೇ ಆದ ಯು.ಟಿ. ಖಾದರ್ ಅವರಿಗೆ ರಾಜ್ಯದಲ್ಲೇ 2ನೇ ಅತ್ಯುನ್ನತ ಸ್ಥಾನ ನೀಡಿ ಗೌರವಿಸಲಾಗಿದೆ. ಇದೀಗ ಸ್ಪೀಕರ್ ಹಾಗೂ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಬೇರು ಬಿಟ್ಟಿರುವ ಡ್ರಗ್ಸ್ ಹಾವಳಿಯನ್ನು ಸಂಪೂರ್ಣ ತೆಗೆದು ಹಾಕಲು ಪಣ ತೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ.
ಜಿಲ್ಲೆಯಲ್ಲಿ ಹೈಸ್ಕೂಲ್ ಮಕ್ಜಳಿನಿಂದ ಆರಂಭಗೊಂಡು ಪಿಜಿ ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯವನ್ನು ಟಾರ್ಗೆಟ್ ಮಾಡಿಕೊಂಡು ಡ್ರಗ್ಸ್ ಜಾಲ ಅಮೀಬಾ ತನ್ನ ಪಾದವನ್ನು ಬೆಳೆಸಿದಂತೆ ಹಬ್ಬಿಕೊಂಡಿದೆ. ಇದು ಸಾವಿರಾರು ವಿದ್ಯಾರ್ಥಿ- ವಿದ್ಯಾರ್ಥಿ ನಿಯರನ್ನು, ಯುವ ಸಮುದಾಯವನ್ನು ಆಪೋಷಣ ಮಾಡಲು ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದೆ. ಡ್ರಗ್ಸ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಲವು ಆತ್ಮಹತ್ಯೆ, ಕೊಲೆಗಳು ನಡೆದಿವೆ. ಇದನ್ನೆಲ್ಲ ತಪ್ಪಿಸಿ ಯುವಕರನ್ನು ಸರಿಯಾದ ಹಾದಿಯಲ್ಲಿ ಮುನ್ನಡೆಸುವ ನಿಟ್ಟಿನಲ್ಲಿ ಡ್ರಗ್ಸ್ ನಿಯಂತ್ರಣ ಮುಖ್ಯವಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯ ಸಹಕಾರ ಮೊದಲು ಸಿಗಬೇಕಾಗಿದೆ. ಡ್ರಗ್ಸ್ ಬಗ್ಗೆ ಮಾಹಿತಿ ಕೊಟ್ಟವನ ಮಾಹಿತಿಯನ್ನೇ ಡ್ರಗ್ಸ್ ಪೂರೈಕೆದಾರರಿಗೆ ನೀಡುವ ಕೆಲಸವನ್ನು ಮಾಡುತ್ತಿರುವ ಕೆಲವು ಪೊಲೀಸ್ ಸಿಬ್ಬಂದಿಗಳು ಕೂಡ ಇಲಾಖೆಯಲ್ಲಿದ್ದಾರೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಪೀಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ಖಡಕ್ ವಾರ್ನಿಂಗ್ ಬಗ್ಗೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ‌.


ಈ ನಿಟ್ಟಿನಲ್ಲಿ ಇಂದು ನಗರದ ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಎವರ್ ನೆಸ್ ಶುರುವಾಗಿದೆ.
ಶಾಲಾ-ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿಗರೇಟ್ ಮತ್ತು ಗುಟ್ಕಾ ಬಳಕೆಯ ವಿರುದ್ಧ ವಿಶೇಷ ಮತ್ತು ಸಾಮೂಹಿಕ ಅಭಿಯಾನದಲ್ಲಿ ನಗರದಾದ್ಯಂತ ಒಟ್ಟು 348 ಅಂಗಡಿಗಳು, ಸಂಸ್ಥೆಗಳನ್ನು ಶೋಧಿಸಲಾಯಿತು. 153 ಸಿಗರೇಟ್ / ಗುಟ್ಕಾ ಎರಡನ್ನೂ ಹೊಂದಿರುವ ಅಂಗಡಿಗಳು ಕಂಡುಬಂದಿವೆ. ಅವರಿಗೆಲ್ಲ COTPA – ಸಿಗರೇಟ್‌ಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆಯಡಿಯಲ್ಲಿ ಕೇಸು ಹಾಕಲಾಗಿದೆ. ಎಲ್ಲರಿಗೂ 200 ರೂ ದಂಡವನ್ನು ವಿಧಿಸಲಾಗಿದೆ ಮತ್ತು ಹಾಗೆ ಮಾಡದಂತೆ ಎಚ್ಚರಿಕೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು