5:24 AM Tuesday23 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ದ.ಕ.: ಒಟ್ಟು 130 ಕಿ.ಮೀ. ಉದ್ದದ ಮಾನವ ಸರಪಳಿಗೆ ಸಾಕ್ಷಿಯಾಗಲಿದೆ ಸೆ. 15; ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ಭಾಗಿ

13/09/2024, 21:19

ಮಂಗಳೂರು(reporterkarnataka.com): ಸೆಪ್ಟೆಂಬರ್ 15ರಂದು ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್‍ನಿಂದ ಸುಳ್ಯ ಸಂಪಾಜೆ ಗೇಟ್‍ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 130 ಕಿ.ಮೀ. ಸಾಗಲಿರುವ ಈ ಮಾನವ ಸರಪಳಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಮೂಲ್ಕಿ-ಸುರತ್ಕಲ್-ಬೈಕಂಪಾಡಿ-ನಂತೂರು-ಪಡೀಲ್-ಬಿ.ಸಿ.ರೋಡು-ಪುತ್ತೂರು-ಸುಳ್ಯ ಮಾರ್ಗದಲ್ಲಿ ಮಾನವ ಸರಪಳಿ ಸಾಗಲಿದೆ.ಭಾನುವಾರ ಬೆಳಿಗ್ಗೆ 9.30ರಿಂದ 9:37 ರವರೆಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲಬೇಕು. 9:37ರಿಂದ 9.40 ರವರೆಗೆ ನಾಡಗೀತೆ, 9.41ರಿಂದ 9:55ರ ವರೆಗೆ ಮುಖ್ಯ ಅತಿಥಿಗಳಿಂದ ಭಾಷಣ, 9:55ರಿಂದ 9:57ರವರೆಗೆ ಸಂವಿಧಾನ ಪ್ರಸ್ತಾವನೆ ಓದುವುದು, 9:57 ರಿಂದ 9:59 ರವರೆಗೆ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಲ್ಲುವುದು. ಬೆಳಿಗ್ಗೆ 10 ಗಂಟೆಗೆ ಮಾನವ ಸರಪಳಿಯಲ್ಲಿಯೇ ತಮ್ಮ ಎರಡು ಕೈಗಳನ್ನು ಮೇಲೆತ್ತಿ ಜೈ ಹಿಂದ್, ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿಯನ್ನು ಕಳಚಲಿದ್ದಾರೆ.
ಈಗಾಗಲೇ ಈ ಬೃಹತ್ ಮಾನವ ಸರಪಳಿಗೆ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿದೆ. ವಿದ್ಯಾರ್ಥಿಗಳು, ಯುವಜನರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿ ಸಿಬ್ಬಂಧಿಗಳು ಸೇರಿದಂತೆ ಸಾರ್ವಜನಿಕರು ಈ ಮಾನವ ಸರಪಳಿಯಲ್ಲಿ ಭಾಗವಹಿಸಲಿದ್ದಾರೆ.
ಸುಗಮ ಸಂಚಾರಕ್ಕಾಗಿ ಹಾಗೂ ಸಂಚಾರ ನಿಯಂತ್ರಣಕ್ಕಾಗಿ ಹೆಚ್ಚಿನ ಬಂದೋಬಸ್ತ್ ಮತ್ತು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು