6:51 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ದ.ಕ.ಸಹಿತ 5 ಜಿಲ್ಲೆಗಳಿಗೆ 721 ಕೋಟಿ ರೂ.ನಲ್ಲಿ ಭೂಕುಸಿತ ಹಾಗೂ ನೆರೆ ಅಪಾಯ ಪರಿಹಾರ ಕಾರ್ಯ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಘೋಷಣೆ

15/08/2023, 11:51

ಮಂಗಳೂರು(reporterkarnataka.com): ರಾಷ್ಟ್ರೀಯ ವಿಪತ್ತು ಉಪ ಶಮನಗಳ ನಿಧಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಐದು ಜಿಲ್ಲೆಗಳಿಗೆ 721 ಕೋಟಿ ರೂ.ನಲ್ಲಿ ಭೂಕುಸಿತ ಹಾಗೂ ನೆರೆ ಅಪಾಯ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ನಗರದ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಷ್ಟ್ರಧ್ವಜ ಹಾರಿಸಿ, ಗೌರವ ವಂದನೆ ಸ್ವೀಕರಿಸಿದ ಬಳಿಕ ಮಾತನಾಡಿದರು.
ಸುರತ್ಕಲ್ ಸಮೀಪದ ಸಸಿಹಿತ್ಲು ಬೀಚ್ ಅನ್ನು ಅಂತಾರಾಷ್ಟ್ರೀಯ ಸರ್ಫಿಂಗ್ ತಾಣವನ್ನಾಗಿಸುವುದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಯೋಜನೆ ರೂಪಿಸಲು ಕ್ರಮಕೈಗೊಳ್ಳಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಕರಾವಳಿಯ ಬೀಚ್ ಟೂರಿಸಂ ಅಭಿವೃದ್ಧಿಗೆ ಕಾರ್ಯಪಡೆ ರಚನೆಯಾಗಲಿದೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಈ ವರ್ಷ ಪೂರ್ಣಗೊಂಡು ಎಲ್ಲಾ ಸೇವೆಗಳನ್ನು ಒಂದೇ ಸೂರಿನಲ್ಲಿ ಒದಗಿಸಲಾಗುವುದು ಎಂದರು.
ನಮ್ಮ ಜಿಲ್ಲೆಯ ಪ್ರಮುಖ ಕಸುಬು ಮೀನುಗಾರಿಕೆಯಾಗಿದ್ದು, ಒಟ್ಟು 42 ಕಿ.ಮೀ. ಸಮುದ್ರ ತೀರವಿರುವ ಜಿಲ್ಲೆಯಲ್ಲಿ 66 ಸಾವಿರಕ್ಕೂ ಹೆಚ್ಚಿನ ಮೀನುಗಾರರಿದ್ದಾರೆ. ಅವರ ಅನುಕೂಲಕ್ಕೆ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾದ ಕರಾವಳಿ ಗ್ಯಾರಂಟಿಗಳಲ್ಲಿ ಈ ಬಾರಿಯ ಆಯವ್ಯಯದಲ್ಲಿ ಹಲವು ಪ್ರೋತ್ಸಾಹಕರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕ್‍ಗಳಲ್ಲಿ 3 ಲಕ್ಷ ರೂ.ಗಳ ವರೆಗೆ ಬಡ್ಡಿ ರಹಿತ ಸಾಲ ನೀಡಲಾಗುವುದು. ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಸೀಮೆಎಣ್ಣೆಯನ್ನು 1.50 ಲಕ್ಷ ಕಿಲೋ ಲೀಟರ್‍ನಿಂದ 2 ಲಕ್ಷ ಕಿಲೋ ಲೀಟರ್ ವರೆಗೆ ಹೆಚ್ಚಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಯಿಂದ ಮೀನುಗಾರರಿಗೆ ಸಾಕಷ್ಟು ಅನುಕೂಲವಾಗಲಿದ್ದು, ಇದಕ್ಕಾಗಿ 250 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಪ್ರಸ್ತುತ ಸೀಮೆಎಣ್ಣೆ ಎಂಜಿನ್‍ಗಳಿರುವ ಮೀನುಗಾರಿಕಾ ಬೋಟ್‍ಗಳನ್ನು ಪೆಟ್ರೋಲ್ ಅಥವಾ ಡೀಸೆಲ್ ಎಂಜಿನ್‍ಗಳಾಗಿ ಬದಲಾಯಿಸಿಕೊಂಡರೆ ತಲಾ 50 ಸಾವಿರ ರೂಪಾಯಿಗಳ ವರೆಗೆ ಸಹಾಯಧನ ನೀಡಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಇಂತಹ ನಾಲ್ಕು ಸಾವಿರ ಮೀನುಗಾರಿಕಾ ದೋಣಿಗಳಲ್ಲಿನ ಎಂಜಿನ್‍ಗಳನ್ನು ಬದಲಾಯಿಸಲು 20 ಕೋಟಿಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ನುಡಿದರು.
ಮೀನುಗಾರಿಕೆ ಇಲಾಖೆ: ಮೀನು ಉತ್ಪಾದನೆಯನ್ನು ಹೆಚ್ಚಿಸುವುದು, ಮೀನು ಹಿಡುವಳಿ, ಇಳಿದಾಣ, ಸಂಸ್ಕರಣೆ, ಜೋಪಾಸನೆ ಮತ್ತು ಮಾರಾಟಕ್ಕೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಪಡಿಸುವುದು, ಮೀನುಗಾರರ ಆರ್ಥಿಕ-ಸಾಮಾಜಿಕವಾಗಿ ಅಭಿವೃದ್ದಿ ಪಡಿಸುವುದು ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಮಾಹಿತಿ ನೀಡುವ ಮುಖ್ಯ ಧ್ಯೇಯೋದ್ದೇಶದಿಂದ 1967 ರಲ್ಲಿ ಮೀನುಗಾರಿಕೆ ಇಲಾಖೆ ಅಸ್ತಿತ್ವಕ್ಕೆ ಬಂದಿತು. ಜಿಲ್ಲೆಯಲ್ಲಿ 23 ಮೀನುಗಾರರ ಸಹಕಾರಿ ಸಂಘಗಳು ಹಾಗೂ ಮೀನುಗಾರಿಕಾ ಫೆಡರೇಶನ್ ಇದೆ. ಅವುಗಳಲ್ಲಿ ಒಟ್ಟು 35,970 ಸದಸ್ಯರಿದ್ದಾರೆ. ಈ ಪೈಕಿ 4 ಮೀನುಗಾರ ಮಹಿಳೆಯರ ಸಹಕಾರಿ ಸಂಘಗಳೂ ಇವೆ. ಪ್ರಸ್ತುತ ಜಿಲ್ಲೆಯಲ್ಲಿ ಸುಮಾರು 102 ಪರ್ಸೀನ್ ದೋಣಿಗಳು 1,354 ಟ್ರಾಲ್‍ದೋಣಿಗಳು, 1,674 ಯಾಂತ್ರೀಕೃತ ನಾಡದೋಣಿಗಳು ಹಾಗೂ 318 ನಾಡದೋಣಿಗಳು ಮೀನುಗಾರಿಕೆಯಲ್ಲಿ ಕಾರ್ಯ ನಿರತವಾಗಿದ್ದು, 2022-23ನೇ ಸಾಲಿನಲ್ಲಿ ರೂ. 4,154 ಕೋಟಿ ಮೌಲ್ಯದ 3.33 ಲಕ್ಷ ಮೆಟ್ರಿಕ್ ಟನ್ ಮೀನು ಉತ್ಪಾದನೆಯಾಗಿದೆ ಎಂದು ಸಚಿವರು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು