6:31 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ದ.ಕ. ಸರಣಿ ಹತ್ಯೆ: ಸೋಷಿಯಲ್ ಮೀಡಿಯಾಗಳ ಮೇಲೆ ಪೊಲೀಸರ ಕಣ್ಗಾವಲು; ಕಾನೂನು ಕ್ರಮದ ಎಚ್ಚರಿಕೆ

31/07/2022, 23:51

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಯ ಬಳಿಕ ಸೋಷಿಯಲ್ ಮೀಡಿಯಾಗಳ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಪ್ರಚೋದನಕಾರಿ ಪೋಸ್ಟ್, ಭಾಷಣದ ವೀಡಿಯೋ ಹಾಕಿದ್ರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವಂತ ಅವರು, ಕೆಲವು ಅಂಶಗಳು ಸಾಮಾಜಿಕ ಮಾಧ್ಯಮದಲ್ಲಿ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ ಎಂದಿದ್ದಾರೆ.

ನಾವು ಪ್ರಚೋದನಕಾರಿ ಪೋಸ್ಟ್, ವೀಡಿಯೋಗಳ ಬಗ್ಗೆ ಹದ್ದಿನ ಕಣ್ಣು ನೆಟ್ಟಿದ್ದೇವೆ. ನಾವು ಅಂತಹುಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು