ಇತ್ತೀಚಿನ ಸುದ್ದಿ
ದ.ಕ., ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿಗಳಾದ ಪದ್ಮರಾಜ್, ಜಯಪ್ರಕಾಶ್ ಹೆಗ್ಡೆಗೆ ಸೋಲು
04/06/2024, 14:59

ಮಂಗಳೂರು(reporterkarnataka.com): ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು ಜಯಗಳಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತನ್ನ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪದ್ಮರಾಜ್ ಆರ್. ಪೂಜಾರಿ ಅವರನ್ನು ಸೋಲಿಸಿದ್ದಾರೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರನ್ನು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಪರಾಭವಗೊಳಿಸಿ ಸಂಸತ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷವನ್ನು ಮತ್ತೆ ನಿರಾಸೆಯತ್ತ ದೂಡಿದೆ.