ಇತ್ತೀಚಿನ ಸುದ್ದಿ
ದ.ಕ. ಉಸ್ತುವಾರಿ ಸಚಿವ ಹಾಗೂ ಶಾಸಕರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ: ಡಿಸಿಎಂ ಉಪಸ್ಥಿತಿ
18/08/2023, 13:40
ಬೆಂಗಳೂರು(reporterkarnataka.com):ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು.
ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿ, ಪ್ರವಾಸೋದ್ಯಮ, ಕಾನೂನು ಸುವ್ಯವಸ್ಥೆ ಮುಂತಾದ ವಿಷಯಗಳ ಕುರಿತು ಚರ್ಚೆ ನಡೆಯಿತು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದ.ಕ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪುತ್ರೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.