5:46 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಡಬಲ್ ಇಂಜಿನ್ ಸರಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳ ಈಡೇರಿಕೆ: ಮಂಗಳೂರಿನಲ್ಲಿ ಪ್ರಧಾನಿ ಮೋದಿ  

02/09/2022, 19:08

ಮಂಗಳೂರು(reporterkarnataka.com): ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅವರು ಶುಕ್ರವಾರ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ 3800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು.

ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಲಾಗಿರುವ ಪ್ರಗತಿಯಲ್ಲಿ ದೊಡ್ಡ ಪಾಲು ಕರ್ನಾಟಕಕ್ಕೆ ಲಭಿಸಿದೆ. ಸಾಗರ ಮಾಲಾ ಯೋಜನೆ, ರಾಷ್ಟ್ರೀಯ ಹೆದ್ದಾರಿಗಳನ್ನೂ ಅಭಿವೃದ್ಧಿ, ರೈಲ್ವೇ ಹಳಿಗಳ ವಿದ್ಯುದ್ದೀಕರಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಾಲ್ಕು ಪಟ್ಟು ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯದಲ್ಲಿ 30 ಲಕ್ಷ ಮನೆಗಳಿಗೆ ನೇರವಾಗಿ ಕುಡಿಯುವ ನೀರು ಪೂರೈಕೆ ಮಾಡಲಾಗಿದೆ. ಪ್ರಧಾನಮಂತ್ರಿ ಆಯುಷ್ಮಾನ್ ಯೋಜನೆಯಡಿ  30 ಲಕ್ಷ ಫಲಾನುಭಿಗಳಿಗೆ 4

ಸಾವಿರ ಕೋಟಿ ರೂ.ಮೊತ್ತದ ವೈದ್ಯಕೀಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯವಾಗಿದೆ ಎಂದು ಹೇಳಿದರು.

ದೇಶದ ಪ್ರಥಮ ಸ್ವದೇಶಿ ಏರ್‌ಕ್ರಾಫ್ಟ್ ವಾಹಕ ನೌಕೆಯನ್ನು ಇಂದು ಕೊಚ್ಚಿಯಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ದೇಶದ ಸೇನಾ ಸುರಕ್ಷತೆಗೆ ಹಾಗೂ ಆರ್ಥಿಕ ಸುರಕ್ಷತೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ನವ ಮಂಗಳೂರು ಬಂದರಿನಲ್ಲಿ ಮೂಲಸೌಲಭ್ಯಗಳ ಅಭಿವೃದ್ಧಿಗೆ

3800 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಇದರಿಂದ ದೇಶದ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗವಕಾಶ ಸೃಷ್ಟಿ ಸಾಧ್ಯವಾಗಲಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಸ್ಥಳೀಯ ಕೃಷಿಕರಿಗೆ ಹಾಗೂ ಮೀನುಗಾರರಿಗೆ ತಮ್ಮ ಉತ್ಪನ್ನಗಳನ್ನು ರಫ್ತು ಮಾಡಲು ಸುಲಭವಾಗಲಿದೆ.  ಕಡಿಮೆ ವೆಚ್ಚದಲ್ಲಿ ಉತ್ಪನ್ನಗಳ ರಫ್ತು ಸಾಧ್ಯವಾಗಲಿದ್ದು, ನವ ಮಂಗಳೂರು ಬಂದರಿನ ಸಾಮರ್ಥ್ಯ ದ್ವಿಗುಣಳ್ಳಲಿದೆ ಎಂದು ಹೇಳಿದರು.

ದೇಶದ ಸ್ವಾತಂತ್ರö್ಯಕ್ಕಾಗಿ ಹೋರಾಡಿದ ವೀರರಾಣಿ ಅಬ್ಬಕ್ಕ ಮತ್ತು  ರಾಣಿ ಚೆನ್ನಭೈರಾದೇವಿ ಅವರು ನಮಗೆ ಸ್ಪೂರ್ತಿಯಾಗಿದ್ದಾರೆ ಎಂದು ಪ್ರಧಾನಿ ಅವರು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಡಬಲ್ ಇಂಜಿನ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ 3800 ಕೋಟಿ ರೂ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ 

ಪ್ರಧಾನಿ ಅವರು ಚಾಲನೆ ನೀಡಿದ್ದು, ಈ ಮೂಲಕ ಕರಾವಳಿಯ ಅಭಿವೃದ್ಧಿಗೆ ವೇಗ ದೊರಕಲಿದೆ. ಬಂದರಿನ ವಹಿವಾಟು ಸಾಮರ್ಥ್ಯ ನಾಲ್ಕು ಪಟ್ಟು ಹೆಚ್ಚಾಗಲಿದ್ದು, ದೇಶದ ಆರ್ಥಿಕತೆಗೆ ಬಲ ತುಂಬಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಮಾತ್ರವಲ್ಲದೆ, ರಾಜ್ಯದ ಅಭಿವೃದ್ದಿ ಸಾಧ್ಯವಾಗಲಿದೆ. ನವಭಾರತದ ನಿರ್ಮಾಣದಲ್ಲಿ ನಮ್ಮ ಕರ್ನಾಟಕ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.

ರಾಜ್ಯದ ಸಿಆರ್‌ಜೆಡ್ ಮಾಸ್ಟರ್ ಪ್ಲಾನ್‌ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಕಳೆದ 30

ವರ್ಷಗಳ ಹೋರಾಟಕ್ಕೆ ಇದೀಗ ಫಲ ದೊರಕಿದೆ. ಇದರಿಂದ ಕರಾವಳಿಯ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಸಾಗರ ಮಾಲಾ ಯೋಜನೆಯಡಿ ಕಾರವಾರ ಬಂದರಿನಲ್ಲಿ ರೂ 276 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳು ಅನುಷ್ಟಾನಗೊಳ್ಳುತ್ತಿವೆ. ಇದೇ ರೀತಿ ಹೊನ್ನಾವರ ಮತ್ತು ಕುಮಟಾ ಬಂದರುಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ.  ಪಿಎಂ ಮತ್ಸö್ಯ ಸಂಪದ ಯೋಜನೆಯಡಿ ಆಳ ಮೀನುಗಾರಿಕೆಗೆ ಹೈಸ್ಪೀಡ್ ಬೋಟ್‌ಗಳನ್ನು ಖರೀದಿಸಲು ಕೇಂದ್ರ ಸರ್ಕಾರ 40 ಶೇಕಡಾ ಸಬ್ಸಿಡ ಒದಗಿಸಲಿದೆ. 


ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ ಸರ್ಬಾನಂದ್ ಸೊನೊವಾಲ, ಶ್ರೀಪಾದ್ ನಾಯಕ್, ಶಾಂತನು ಠಾಕೂರ್, ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಸುನೀಲ್ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು