4:39 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

Dacoity | ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ ದರೋಡೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳ ಬಂಧನ

26/02/2025, 22:56

ಮಂಗಳೂರು(reporterkarnataka.com): ಕೋಟೆಕಾರ್ ಸಮೀಪದ ಕೆ.ಸಿ. ರೋಡ್‌ನಲ್ಲಿರುವ
ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ಕನ್ಯಾನ ಮೂಲದ ಭಾಸ್ಕ‌ರ್ ಬೆಳ್ಳಪಾಡ ಯಾನೆ ಶಶಿ ತೇವ‌ರ್ (69) ಮತ್ತು ಕೆ.ಸಿ.ರೋಡ್ ನಿವಾಸಿ ಮಹಮ್ಮದ್ ನಝೀರ್ ಎಂದು ಗುರುತಿಸಲಾಗಿದೆ. ಆರೋಪಿ
ಭಾಸ್ಕರ್ ಬೆಳ್ಳಪಾಡನನ್ನು ಪೊಲೀಸರು ಫೆ. 24ರಂದು ಬೆಂಗಳೂರಿನ ರೈಲ್ವೇ ಸ್ಟೇಷನ್ ಬಳಿ ವಶಕ್ಕೆ ಪಡೆದು ವಿಚಾರಿಸಿದಾಗ ಮಹಮ್ಮದ್ ನಝೀರ್ ಬಗ್ಗೆ ಮಾಹಿತಿ ನೀಡಿದ್ದ. ನಝೀರ್ ಮತ್ತು ಭಾಸ್ಕರ್ ಕಳೆದ 7 ವರ್ಷಗಳಿಂದ ಸಂಪರ್ಕದಲ್ಲಿದ್ದು, ಕೋಟೆಕಾ‌ರ್ ಬ್ಯಾಂಕ್ ದರೋಡೆ ಕೃತ್ಯವೆಸಗಲು ಸುಮಾರು 6 ತಿಂಗಳಿನಿಂದ ಇತರ ಆರೋಪಿಗಳೊಂದಿಗೆ ಸೇರಿ ಸಂಚು ರೂಪಿಸಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ನಝೀರ್ ಎಂಬಾತ ಭಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ ಜೊತೆ ದರೋಡೆ ಪ್ರಕರಣದಲ್ಲಿ ಶಾಮೀಲಾಗಿದ್ದು, ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡವನ್ನು ಆರೋಪಿಗಳಿಗೆ ತೋರಿಸಿಕೊಟ್ಟು ದರೋಡೆ ನಡೆಸಬೇಕಾದ ದಿನ, ವೇಳೆ ಹಾಗೂ ಸೊಸೈಟಿಯಲ್ಲಿರುವ ಸಿಬ್ಬಂದಿಗಳ ಬಗ್ಗೆ ಮತ್ತು ಕೃತ್ಯದ ನಂತರ ತಪ್ಪಿಸಿಕೊಂಡು ಹೋಗುವ ಮಾರ್ಗ ಮುಂತಾದ ಮಾಹಿತಿಯನ್ನು ನಝೀರ್ ಆರೋಪಿಗಳಿಗೆ ನೀಡಿದ್ದ ಎಂದು ತಿಳಿದು ಬಂದಿದೆ.
ಪ್ರಕರಣದ ಆರೋಪಿಗಳ ಪತ್ತೆಯ ಬಗ್ಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಅವರ ನಿರ್ದೆಶನದಂತೆ ಉಪ ಪೊಲೀಸ್ ಆಯುಕ್ತರಾದ ಸಿದ್ಧಾರ್ಥ ಗೋಯಲ್, ರವಿಶಂಕರ್ ಮತ್ತು ದಕ್ಷಿಣ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷರಾದ ಟಿ. ಡಿ ನಾಗರಾಜ್ ಉಳ್ಳಾಲ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಉಳ್ಳಾಲ ಠಾಣಾ ಪಿ.ಎಸ್.ಐ ರವರಾದ ಶೀತಲ್ ಅಲಗೂರ, ಸಂತೋಷ್ ಕುಮಾರ್ ಡಿ ಮತ್ತು ಸಿಬ್ಬಂದಿಗಳು ಆರೋಪಿಗಳ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಪ್ರಕರಣದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಭಾಸ್ಕರ್ ಬೆಳ್ಚಪಾಡ ಸುಮಾರು 25 ವರ್ಷಗಳಿಂದ ಹುಟ್ಟೂರಾದ ಕನ್ಯಾನವನ್ನು ಬಿಟ್ಟು ಮುಂಬೈನಲ್ಲಿ ವಾಸವಾಗಿದ್ದು ಈತನ ವಿರುದ್ಧ ಬೇರೆ – ಬೇರೆ ಪೊಲೀಸ್ ಠಾಣೆಯಲ್ಲಿ ಡಕಾಯಿತಿ, ಸುಲಿಗೆ, ಶಸ್ತ್ರಾಸ್ತ್ರ ಕಾಯ್ದೆಯಡಿಲ್ಲಿ ಪ್ರಕರಣಗಳು ದಾಖಲಾಗಿರುತ್ತವೆ.
ಪ್ರಕರಣಗಳು
1) 2011 ರಲ್ಲಿ ಹೊಸ ದೆಹಲಿಯಲ್ಲಿ ದರೋಡೆಗೆ ಪ್ರಯತ್ನದ ಪ್ರಕರಣ.
2) 2021 ರಲ್ಲಿ ಮುಂಬೈ ಕ್ರೈಂ ಬ್ರಾಂಚ್ ಸಿ.ಐ.ಡಿ ಠಾಣಾ ವ್ಯಾಪ್ತಿಯಲ್ಲಿ ಭಾರತ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಪ್ರಕರಣ.
3) 2022 ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ.
4) 2022 ರಲ್ಲಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಪ್ರಯತ್ನ ಪ್ರಕರಣ.

ಜನವರಿ 17ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಸಿ.ರೋಡ್​ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಪಿಸ್ತೂಲ್ ತೋರಿಸಿ ಒಳಬಂದ ಐವರು ದರೋಡೆಕೋರರು ಕೆ.ಜಿಗಟ್ಟಲೆ ಚಿನ್ನ ಮತ್ತು ನಗದು ದರೋಡೆ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು